ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಾಲಿಬಾನ್‌ನೊಂದಿಗೆ ಅಧಿಕಾರ ಹಂಚಿಕೆಗೆ ಮುಂದಾದ ಅಫ್ಗಾನಿಸ್ತಾನ ಸರ್ಕಾರ

Last Updated 12 ಆಗಸ್ಟ್ 2021, 13:11 IST
ಅಕ್ಷರ ಗಾತ್ರ

ದೋಹಾ: ತಾಲಿಬಾನ್‌ನೊಂದಿಗೆ ಅಧಿಕಾರ ಹಂಚಿಕೆ ಒಪ್ಪಂದಕ್ಕೆ ಬರಲು ಅಫ್ಗಾನಿಸ್ತಾನ ಸರ್ಕಾರ ಮುಂದಾಗಿದೆ ಎಂದು ಸುದ್ದಿಸಂಸ್ಥೆ ಎಎಫ್‌ಪಿ ವರದಿ ಮಾಡಿದೆ.

ಅಫ್ಗಾನಿಸ್ತಾನದಲ್ಲಿ ನಡೆಯುತ್ತಿರುವ ಆಂತರಿಕ ಸಂಘರ್ಷವನ್ನು ಕೊನೆಗೊಳಿಸುವ ನಿಟ್ಟಿನಲ್ಲಿ ಅಲ್ಲಿನ ಸರ್ಕಾರ ಈ ನಿರ್ಧಾರವನ್ನು ಕೈಗೊಂಡಿದೆ ಎಂಬ ಮಾಹಿತಿ ಲಭ್ಯವಾಗಿದೆ.

ತಾಲಿಬಾನ್‌ ಮುಖಂಡರ ಜೊತೆ ಕತಾರ್‌ನಲ್ಲಿ ನಡೆದಿರುವ ಶಾಂತಿ ಸಭೆಯಲ್ಲಿ ಅಫ್ಗಾನಿಸ್ತಾನದ ಸಂಧಾನಕಾರರು ಅಧಿಕಾರ ಹಂಚಿಕೆಯ ಒಪ್ಪಂದದ ಬಗ್ಗೆ ಚರ್ಚೆ ನಡೆಸಿದ್ದಾರೆ.

ತಾಲಿಬಾನ್‌ ಇತ್ತೀಚಿನ ದಿನಗಳಲ್ಲಿ ತನ್ನ ಪ್ರಾಬಲ್ಯವನ್ನು ತೀವ್ರ ಗತಿಯಲ್ಲಿ ಸಾಧಿಸುತ್ತಿರುವುದು ಅಫ್ಗಾನಿಸ್ತಾನದ ಸರ್ಕಾರವನ್ನು ಚಿಂತೆಗೀಡು ಮಾಡಿದೆ.

ಹಲವೆಡೆ ಯುದ್ಧದ ಸ್ಥಳಗಳಿಂದ ವಿಶೇಷ ಕಾರ್ಯಾಚರಣೆ ಪಡೆಗಳೇ ಪಲಾಯನಗೈದಿವೆ. ಅಪಾರ ವೆಚ್ಚ ಮಾಡಿ ತರಬೇತಿ ಪಡೆದಿದ್ದರೂ ಸೇನಾ ಪಡೆಗಳು ಯುದ್ಧ ಭೂಮಿಯಿಂದ ಓಡಿ ಹೋಗುತ್ತಿರುವುದು ಏಕೆ ಎನ್ನುವ ಪ್ರಶ್ನೆ ಸರ್ಕಾರವನ್ನು ಕಾಡುತ್ತಿದೆ.

ಈ ತಿಂಗಳ ಅಂತ್ಯಕ್ಕೆ ಸೇನೆಯನ್ನು ವಾಪಸ್‌ ಕರೆಯಿಸಿಕೊಳ್ಳುವುದಾಗಿ ಹೇಳಿರುವ ಅಮೆರಿಕ, ಕೆಲವೆಡೆ ವಾಯು ದಾಳಿ ಮಾತ್ರ ನಡೆಸಿದೆ. ಆದರೆ, ಇತರ ಕಾರ್ಯಾಚರಣೆಯಿಂದ ದೂರವೇ ಉಳಿದಿದೆ.

ಅಫ್ಗಾನಿಸ್ತಾನದ 400 ಜಿಲ್ಲೆಗಳ ಪೈಕಿ 230 ಜಿಲ್ಲೆಗಳಲ್ಲಿ ತಾಲಿಬಾನ್‌ ನಿಯಂತ್ರಣ ಸಾಧಿಸಿದೆ ಎಂದು ಐರೋಪ್ಯ ಒಕ್ಕೂಟದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT