ಶುಕ್ರವಾರ, ಸೆಪ್ಟೆಂಬರ್ 24, 2021
21 °C

ತಾಲಿಬಾನಿ ಉಗ್ರನ ಬಂದೂಕಿಗೆ ಎದೆಯೊಡ್ಡಿದ ದಿಟ್ಟ ಮಹಿಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಾಬೂಲ್‌: ಅಫ್ಗನ್‌ ಮಹಿಳೆಯೊಬ್ಬರು ತಾಲಿಬಾನಿ ಉಗ್ರನ ಬಂದೂಕಿಗೆ ಎದೆಯೊಡ್ಡಿರುವ ಚಿತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿದೆ.

ಈ ಚಿತ್ರವನ್ನು ರಾಯಿಟರ್ಸ್‌ ಸುದ್ದಿ ಸಂಸ್ಥೆ ಪ್ರಕಟಿಸಿದ್ದು. ಸಾಮಾಜಿಕ ಜಾಲತಾಣಗಳಲ್ಲಿ ಈ ಚಿತ್ರ ವೈರಲ್‌ ಆಗುತ್ತಿದೆ. 

ಮಂಗಳವಾರ ಪಾಕಿಸ್ತಾನದ ರಾಯಭಾರಿ ಕಚೇರಿ ಎದುರು ಅಫ್ಗನ್‌ ಮಹಿಳೆಯರ ಗುಂಪೊಂದು ಪ್ರತಿಭಟನೆ ನಡೆಸುತ್ತಿತ್ತು. ಈ ವೇಳೆ ಮಹಿಳೆಯರನ್ನು ಚದುರಿಸಲು ತಾಲಿಬಾನಿ ಉಗ್ರರ ಗುಂಪು ಸ್ಥಳಕೆ ಬಂದಿದೆ. 

ತಾಲಿಬಾನಿ ಉಗ್ರನೊಬ್ಬ ಬಂದೂಕಿನ ಬೆದರಿಕೆಯೊಡ್ಡಿದಾಗ ಪ್ರತಿಭಟನನಿರತ ಮಹಿಳೆಯೊಬ್ಬರು ಬಂದೂಕಿನ ನಳಿಕೆಗೆ ಎದೆಯೊಡ್ಡಿದ್ದಾರೆ. ಈ ಚಿತ್ರ ಕುರಿತಂತೆ ಹೆಚ್ಚಿನ ಮಾಹಿತಿಗಳು ಲಭ್ಯವಾಗಿಲ್ಲ.

ಈ ಚಿತ್ರವನ್ನು ಲಕ್ಷಾಂತರ ಜನರು ಹಂಚಿಕೊಂಡಿದ್ದಾರೆ. ಆ ಮಹಿಳೆಯ ಬಗ್ಗೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 


ತಾಲಿಬಾನಿ ಉಗ್ರನ ಬಂದೂಕಿಗೆ ಎದೆಯೊಡ್ಡಿದ ಮಹಿಳೆ 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು