ಶುಕ್ರವಾರ, ಜುಲೈ 1, 2022
28 °C

ಕಾಬೂಲ್‌: ಮಸೀದಿಯಲ್ಲಿ ಬಾಂಬ್‌ ಸ್ಫೋಟ– 10 ಸಾವು, 15 ಜನರಿಗೆ ಗಾಯ

ಪ್ರಜಾವಾಣಿ ವೆಬ್‌ ಡೆಸ್ಕ್‌‌ Updated:

ಅಕ್ಷರ ಗಾತ್ರ : | |

ಕಾಬೂಲ್‌: ಅಫ್ಗಾನಿಸ್ತಾನದ ಮಸೀದಿಯೊಂದರಲ್ಲಿ ಶುಕ್ರವಾರ ಪ್ರಬಲ ಬಾಂಬ್‌ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಕನಿಷ್ಠ 10 ಮಂದಿ ಮೃತಪಟ್ಟಿದ್ದು, 15 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪಶ್ಚಿಮ ಕಾಬೂಲ್‌ನ ಖಲೀಫಾ ಸಾಹಿಬ್ ಮಸೀದಿಯಲ್ಲಿ ಶುಕ್ರವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಸ್ಫೋಟ ಸಂಭವಿಸಿದೆ ಎಂದು ಆಂತರಿಕ ಸಚಿವಾಲಯದ ಉಪ ವಕ್ತಾರ ಬೆಸ್ಮುಲ್ಲಾ ಹಬೀಬ್ ಹೇಳಿದ್ದಾರೆ.

ಇತ್ತೀಚಿನ ದಿನಗಳಲ್ಲಿ ನಡೆದ ಸ್ಫೋಟಗಳಲ್ಲಿ ಹಲವಾರು ಅಫ್ಗನ್‌ ನಾಗರಿಕರು ಕೊಲ್ಲಲ್ಪಟ್ಟಿದ್ದಾರೆ. ಇಸ್ಲಾಮಿಕ್‌ ಸ್ಟೇಟ್ ಸಂಘಟನೆಯು ಬಹುತೇಕ ಸ್ಫೋಟಗಳ ಹೊಣೆ ಹೊತ್ತುಕೊಂಡಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು