ಶನಿವಾರ, 27 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಫ್ಗನ್; ಕಾಬೂಲ್‌ನಲ್ಲಿ ಗುಂಡಿನ ದಾಳಿಗೆ 17 ಸಾವು: ವರದಿ

Last Updated 4 ಸೆಪ್ಟೆಂಬರ್ 2021, 8:42 IST
ಅಕ್ಷರ ಗಾತ್ರ

ಕಾಬೂಲ್‌: ಅಫ್ಗಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿ ಶುಕ್ರವಾರ ರಾತ್ರಿ ನಡೆದಗುಂಡಿನ ದಾಳಿಯಲ್ಲಿ ಕನಿಷ್ಠ 17 ಮಂದಿ ಮೃತಪಟ್ಟಿದ್ದು, 41 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಅಫ್ಗಾನಿಸ್ತಾನದ ಟೊಲೊ ನ್ಯೂಸ್ ವರದಿಯನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ಕಾಬೂಲ್‌ನ ಉತ್ತರ ಭಾಗದಲ್ಲಿರುವ ಪಂಜ್‌ಶಿರ್ ಕಣಿವೆಯನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಾಲಿಬಾನ್ ಹೇಳಿಕೊಂಡಿದೆ. ಅಲ್ಲದೆ ಶುಕ್ರವಾರ ರಾತ್ರಿ ಕಾಬೂಲ್‌ನಲ್ಲಿ ಸಂಭ್ರಮಾಚರಣೆ ವೇಳೆಯಲ್ಲಿ ಗಾಳಿಯಲ್ಲಿ ಗುಂಡು ಹಾರಿಸಲಾಗಿದೆ ಎನ್ನಲಾಗಿದೆ.

ಇನ್ನು ಕೆಲವು ಮಾಧ್ಯಮಗಳ ಪ್ರಕಾರ, ಪಂಜ್‌ಶಿರ್‌ನಲ್ಲಿ ಕದನ ಮುಂದುವರಿದಿದೆ. ಕಳೆದ ಕೆಲವು ದಿನಗಳಿಂದ ನಡೆದ ಘರ್ಷಣೆಯಲ್ಲಿ ಎರಡೂ ಕಡೆಯ 300ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ತಾಲಿಬಾನ್ ಹೇಳಿಕೆಯನ್ನು ಪಂಜ್‌ಶಿರ್ ನಾಯಕರು ನಿರಾಕರಿಸಿದ್ದಾರೆ. ಪಂಜ್‌ಶಿರ್ ಪ್ರಾಂತ್ಯವನ್ನು ತಾಲಿಬಾನ್ ವಶಕ್ಕೆ ಪಡೆದಿದೆ ಎಂಬ ಪಾಕಿಸ್ತಾನ ಮಾಧ್ಯಮಗಳ ವರದಿಗಳು ಸುಳ್ಳಾಗಿದ್ದು, ಪ್ರತಿರೋಧ ಮುಂದುವರಿದಿದೆ ಎಂದು ನಾಯಕ ಅಹ್ಮದ್ ಮಸೂದ್ ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT