ಬುಧವಾರ, ಮಾರ್ಚ್ 22, 2023
32 °C

ಅಫ್ಗಾನಿಸ್ತಾನ: ಮಹಿಳೆಯರಿಗೆ ಉನ್ನತ ಶಿಕ್ಷಣ ನಿಷೇಧಿಸಿದ ತಾಲಿಬಾನ್‌

ಪ್ರಜಾವಾಣಿ ವೆಬ್‌ಡೆಸ್ಕ್‌ Updated:

ಅಕ್ಷರ ಗಾತ್ರ : | |

ಕಾಬೂಲ್: ಅಫ್ಗಾನಿಸ್ತಾನದಲ್ಲಿ ಮಹಿಳೆಯರಿಗೆ ಉನ್ನತ ಶಿಕ್ಷಣವನ್ನು ಅನಿರ್ದಿಷ್ಟಾವಧಿಗೆ ನಿಷೇಧಿಸಿ ತಾಲಿಬಾನ್‌ ಉನ್ನತ ಶಿಕ್ಷಣ ಸಚಿವಾಲಯ ಆದೇಶ ಹೊರಡಿಸಿದೆ.

ಮುಂದಿನ ಆದೇಶದವರೆಗೂ ವಿಶ್ವವಿದ್ಯಾಲಯ ಶಿಕ್ಷಣ ಸೇರಿದಂತೆ ಉನ್ನತ ಶಿಕ್ಷಣವನ್ನು ವಿದ್ಯಾರ್ಥಿನಿಯರಿಗೆ ಸ್ಥಗಿತಗೊಳಿಸುವಂತೆ  ತಾಲಿಬಾನ್‌ ಆದೇಶಿಸಿದೆ ಎಂದು ಇಲ್ಲಿನ ಟೋಲ್‌ ಸುದ್ದಿ ಸಂಸ್ಥೆ ಟ್ವೀಟ್‌ ಮಾಡಿದೆ.

ಅಫ್ಗಾನಿಸ್ತಾನವನ್ನು ತಾಲಿಬಾನ್‌ ವಶಕ್ಕೆ ಪಡೆದ ನಂತರ ಮಹಿಳೆಯರ ಮೂಲಭೂತ ಹಕ್ಕುಗಳನ್ನು ತೀವ್ರವಾಗಿ ನಿರ್ಬಂಧಿಸುವ ನೀತಿಗಳನ್ನು ಜಾರಿಗೆ ತಂದಿದೆ.

ಉನ್ನತ ಹುದ್ದೆಗಳಲ್ಲಿದ್ದ ಮಹಿಳೆಯರನ್ನು ತಾಲಿಬಾನ್‌ ವಜಾಗೊಳಿಸಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು