ಕಾಬೂಲ್: ಅಫ್ಗಾನಿಸ್ತಾನದ ತಾಲಿಬಾನ್ ನಿಯಂತ್ರಿತ ಪ್ರದೇಶದಲ್ಲಿ ಉಂಟಾದ ಪ್ರವಾಹದಿಂದಾಗಿ 40 ಮಂದಿ ಮೃತಪಟ್ಟಿದ್ದು, ಹಲವರು ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಫ್ಗಾನಿಸ್ತಾನದ ಪೂರ್ವ ಪ್ರಾಂತ್ಯ ನುರಿಸ್ತಾನದ ಕಾಮ್ದೇಶ್ ಜಿಲ್ಲೆಯಲ್ಲಿ ದುರಂತ ಸಂಭವಿಸಿದೆ. ಈ ಪ್ರದೇಶ ತಾಲಿಬಾನ್ ಉಗ್ರರ ನಿಯಂತ್ರಣದಲ್ಲಿದ್ದು, ದೂರಸಂಪರ್ಕ ವ್ಯವಸ್ಥೆ ಅಸಮರ್ಪಕವಾಗಿದೆ. ನಿಖರವಾದ ಮಾಹಿತಿ ಕಲೆಹಾಕುವುದಕ್ಕೆ ಕಷ್ಟವಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

‘ಮೂಲಗಳ ಪ್ರಕಾರ 60 ಮನೆಗಳು ನಾಶವಾಗಿದ್ದು, 100ಕ್ಕೂ ಹೆಚ್ಚು ಮಂದಿ ಕಾಣೆಯಾಗಿದ್ದಾರೆ’ ಎಂದು ವಿಪತ್ತು ನಿರ್ವಹಣಾ ಸಚಿವಾಲಯದ ವಕ್ತಾರ ಸಮೀವುಲ್ಲಾ ಜರ್ಬಿ ಹೇಳಿದ್ದಾರೆ.

ಕಾಣೆಯಾದವರನ್ನು ಹುಡುಕಲು ತಾಲಿಬಾನಿಗಳು ಗ್ರಾಮಸ್ಥರಿಗೆ ಸಹಾಯ ಮಾಡುತ್ತಿದ್ದಾರೆ ಎಂದು ಹೇಳಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.