ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಬೂಲ್ ಶಿಕ್ಷಣ ಕೇಂದ್ರದಲ್ಲಿ ಆತ್ಮಾಹುತಿ ಬಾಂಬ್ ದಾಳಿ: ಸಾವಿನ ಸಂಖ್ಯೆ 35ಕ್ಕೆ

Last Updated 1 ಅಕ್ಟೋಬರ್ 2022, 9:55 IST
ಅಕ್ಷರ ಗಾತ್ರ

ಕಾಬೂಲ್: ಕಾಜ್‌ ಉನ್ನತ ಶಿಕ್ಷಣ ಕೇಂದ್ರದ ಕೊಠಡಿಯೊಂದರ ಮೇಲೆ ನಡೆದ ಆತ್ಮಾಹುತಿ ಬಾಂಬ್‌ ಸ್ಫೋಟದಿಂದಾಗಿ ಮೃತಪಟ್ಟವರ ಸಂಖ್ಯೆ 35ಕ್ಕೆ ಏರಿಕೆಯಾಗಿದೆ ಎಂದು ಅಫ್ಗಾನಿಸ್ತಾನದಲ್ಲಿರುವ ವಿಶ್ವಸಂಸ್ಥೆಯ ನಿಯೋಗ ಮಾಹಿತಿ ನೀಡಿದೆ.

ಕಾಬೂಲ್‌ನ ಪೂರ್ವಕ್ಕಿರುವ ದೇಷ್ಟ್‌–ಇ–ಬಾರ್ಚಿಯಲ್ಲಿರುವ ತರಗತಿ ಕೊಠಡಿಯಲ್ಲಿ ಆತ್ಮಾಹುತಿ ಬಾಂಬ್‌ ದಾಳಿಕೋರ ಶುಕ್ರವಾರ ತನ್ನನ್ನು ತಾನು ಸ್ಫೋಟಿಸಿಕೊಂಡಿದ್ದ. ದಾಳಿ ವೇಳೆ ಕೊಠಡಿಯಲ್ಲಿದ್ದ ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿಶ್ವವಿದ್ಯಾಲಯದ ಪ್ರವೇಶ ಪರೀಕ್ಷೆಗೆ ಪೂರ್ವಸಿದ್ಧತಾ ಪರೀಕ್ಷೆ ಬರೆಯುತ್ತಿದ್ದರು.

'ದಾಳಿಯಿಂದಾಗಿ ಮೃತಪಟ್ಟವರ ಸಂಖ್ಯೆ 35ಕ್ಕೆ ಏರಿಕೆಯಾಗಿದೆ. 82ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ' ಎಂದು ವಿಶ್ವಸಂಸ್ಥೆಯ ನಿಯೋಗ ಪ್ರಕಟಿಸಿದೆ.

ಈ ವರೆಗೆ ಯಾವುದೇ ಸಂಘಟನೆಯು ದಾಳಿಯ ಹೊಣೆ ಹೊತ್ತುಕೊಂಡಿಲ್ಲ ಎಂದು ಕಾಜ್‌ ಉನ್ನತ ಶಿಕ್ಷಣ ಕೇಂದ್ರ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT