ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಫ್ರಿಕಾ: ಕೋವಿಡ್‌ ಪ್ರಕರಣಗಳು ಮತ್ತೆ ಹೆಚ್ಚಳ

Last Updated 28 ಏಪ್ರಿಲ್ 2022, 13:34 IST
ಅಕ್ಷರ ಗಾತ್ರ

ಜೋಹಾನ್ಸ್‌ಬರ್ಗ್‌/ನೈರೋಬಿ/ಡಾಕರ್‌: ದಕ್ಷಿಣ ಆಫ್ರಿಕಾದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದ್ವಿಗುಣವಾಗಿರುವುದರಿಂದ ಆಫ್ರಿಕಾ ಖಂಡದಲ್ಲಿ ಕೋವಿಡ್‌ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯೂಎಚ್‌ಒ) ಹೇಳಿದೆ.‌

ಕೋವಿಡ್‌ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಎಲ್ಲರೂ ಲಸಿಕೆ ತೆಗೆದುಕೊಳ್ಳಬೇಕು ಎಂದು ವಿಶ್ವ ಆರೋಗ್ಯ ಸಂಸ್ಥೆಯ ಆಫ್ರಿಕಾ ಕಚೇರಿಯ ಸಾಂಕ್ರಾಮಿಕ ಮತ್ತು ಸಾಂಕ್ರಾಮಿಕವಲ್ಲದ ರೋಗಗಳ ನಿರ್ದೇಶಕ ಬೆನಿಡೋ ಇಂಪೌಮಾ ಹೇಳಿದರು.

‘ಕೋವಿಡ್‌ ಪ್ರಕರಣಗಳು ಹಾಗೂ ಸಾವಿನ ಪ್ರಮಾಣ ಕಳೆದ ಎರಡು ತಿಂಗಳಿನಿಂದಲೂ ಕಡಿಮೆಯಾಗಿತ್ತು. ಆದರೆ ಈ ವಾರದಲ್ಲಿ ಸೋಂಕು ಹಾಗೂ ಸಾವಿನ ಪ್ರಕರಣಗಳು ಹೆಚ್ಚುತ್ತಿವೆ. ಸೋಂಕಿನ ಪ್ರಕರಣಗಳ ಹೆಚ್ಚಳಕ್ಕೆ ಉಪ ತಳಿ ಅಥವಾ ಕೊರೊನಾದ ಹೊಸ ರೂಪಾಂತರ ವೈರಾಣು ಕಾರಣ ಎಂಬುದಕ್ಕೆ ಯಾವುದೇ ಪುರಾವೆ ದೊರಕಿಲ್ಲ’ ಎಂದು ಇಂಪೌಮಾ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT