ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬ್ರಿಟನ್ ಆಯ್ತು, ಈಗ ಜಪಾನ್‌ನಲ್ಲಿ ಹೊಸ ರೂಪದ ಕೊರೊನಾ ವೈರಸ್ ಪತ್ತೆ!

Last Updated 11 ಜನವರಿ 2021, 2:24 IST
ಅಕ್ಷರ ಗಾತ್ರ

ಬೆಂಗಳೂರು: ಜಾಗತಿಕವಾಗಿ ಕೋವಿಡ್ 19 ವೈರಸ್ ಅವಾಂತರ ವಿವಿಧ ಸಮಸ್ಯೆ ತಂದೊಡ್ಡಿದ್ದರೆ, ಬ್ರಿಟನ್‌ನಲ್ಲಿ ಪತ್ತೆಯಾದ ರೂಪಾಂತರ ಕೊರೊನಾ ವೈರಸ್ ಆತಂಕಕ್ಕೆ ಕಾರಣವಾಗಿದೆ. ಈ ಮಧ್ಯೆ ಜಪಾನ್‌ನಲ್ಲಿ ಕೂಡ ಇಂತಹುದೇ ರೂಪದ ಮತ್ತೊಂದು ಕೊರೊನಾ ವೈರಸ್ ಆವೃತ್ತಿ ಪತ್ತೆಯಾಗಿದೆ! 'ಜಪಾನ್ ನ್ಯಾಶನಲ್ ಇನ್ಸ್ಟಿಟ್ಯೂಟ್ ಆಫ್ ಇನ್ಫೆಕ್ಷಿಯಸ್ ಡಿಸೀಸಸ್' ಹೇಳಿಕೆ ಪ್ರಕಾರ, ಅಲ್ಲಿನ ಅಧಿಕಾರಿಗಳು ಬ್ರೆಝಿಲ್‌ನಿಂದ ಬಂದ ನಾಲ್ವರು ಪ್ರಯಾಣಿಕರಲ್ಲಿ ಹೊಸರೂಪದ ಕೊರೊನಾ ವೈರಸ್ ಪತ್ತೆಹಚ್ಚಿದ್ದಾರೆ ಎಂದಿದೆ.

ಭಾನುವಾರ ಈ ಕುರಿತು ಜಪಾನ್ ಸಂಸ್ಥೆ ಹೇಳಿಕೆ ಬಿಡುಗಡೆ ಮಾಡಿದ್ದು, ಬ್ರಿಟನ್ ಮತ್ತು ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾದ ಮಾದರಿಯಲ್ಲಿಯೇ ಹೊಸ ಕೊರೊನಾ ವೈರಸ್ ಲಕ್ಷಣಗಳನ್ನು ಹೊಂದಿದೆ. ಇದು ರೂಪಾಂತರಗೊಂಡ ವೈರಸ್ ಆವೃತ್ತಿ ಆಗಿರುವ ಸಾಧ್ಯತೆಯಿದೆ. ಆದರೆ ಈಗಲೇ ಈ ಕುರಿತು ಖಚಿತವಾಗಿ ಹೇಳಲಾಗದು, ಅಲ್ಲದೆ ಹೊಸ ವೈರಸ್ ಕುರಿತು ಪರಿಶೀಲಿಸಲಾಗುತ್ತಿದೆ ಎಂದು ತಿಳಿಸಿದೆ.

ಜಪಾನ್ ಆರೋಗ್ಯ ಸಚಿವಾಲಯ ಕೂಡ ಪ್ರತ್ಯೇಕ ಹೇಳಿಕೆ ಬಿಡುಗಡೆ ಮಾಡಿದ್ದು, ಜ.2ರಂದು ಬ್ರೆಝಿಲ್‌ನಿಂದ ಜಪಾನ್ ಹನೇಡಾ ವಿಮಾನ ನಿಲ್ದಾಣಕ್ಕೆ ಬಂದಿರುವ ನಾಲ್ವರು ಪ್ರಯಾಣಿಕರಲ್ಲಿ ಹೊಸ ರೂಪದ ವೈರಸ್ ಕಾಣಿಸಿಕೊಂಡಿದೆ. ಈ ಪೈಕಿ 40 ವರ್ಷದ ಪುರುಷನ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಿದೆ.

ಅಲ್ಲದೆ, ವಿಶ್ವ ಆರೋಗ್ಯ ಸಂಸ್ಥೆಗೂ ಈ ಕುರಿತು ಮಾಹಿತಿ ನೀಡಲಾಗಿದ್ದು,ರೂಪಾಂತರ ವೈರಸ್ ಕುರಿತು ಹೆಚ್ಚಿನ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಎನ್‌ಐಐಡಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT