ನವದೆಹಲಿ: ಅಮೆರಿಕದ ನೆವಾರ್ಕ್‌ನಿಂದ ನವದೆಹಲಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ತೈಲ ಸೋರಿಕೆಯಾಗಿದ್ದರಿಂದ ಸ್ವೀಡನ್ ರಾಜಧಾನಿ ಸ್ಟಾಕ್‌ಹೋಮ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.
ತೈಲ ಸೋರಿಕೆಯಾಗಿ, ಎಂಜಿನ್ ಕೆಟ್ಟು ಹೋಗಿದೆ. ಹೀಗಾಗಿ ಸ್ಟಾಕ್‌ಹೋಮ್‌ನಲ್ಲಿ ವಿಮಾನವನ್ನು ಸುರಕ್ಷಿತವಾಗಿ ಇಳಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಪ್ರಾಥಮಿಕ ತನಿಖೆ ವೇಳೆ ಎರಡನೇ ಎಂಜಿನ್‌ನ ಕೊಳವೆಯೊಂದರಿಂದ ತೈಲ ಸೋರಿಕೆಯಾಗಿದ್ದು ಕಂಡುಬಂದಿದೆ. ಹೆಚ್ಚಿನ ತನಿಖೆ ಪ್ರಗತಿಯಲ್ಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವಿಮಾನದಲ್ಲಿ ಒಟ್ಟು 300 ಮಂದಿ ಪ್ರಯಾಣಿಕರಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.