ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಲ್‌ಕೈದಾ ಮುಖ್ಯಸ್ಥ ಝವಾಹಿರಿ ಹತ್ಯೆ: ಡ್ರೋನ್ ದಾಳಿ ಖಂಡಿಸಿದ ತಾಲಿಬಾನ್

Last Updated 2 ಆಗಸ್ಟ್ 2022, 4:50 IST
ಅಕ್ಷರ ಗಾತ್ರ

ಕಾಬೂಲ್: ಅಮೆರಿಕವು ಕಾಬೂಲ್‌ನ ನಿವಾಸವೊಂದರ ಮೇಲೆ ಕಳೆದ ವಾರ ಡ್ರೋನ್ ದಾಳಿ ನಡೆಸಿದೆ ಎಂದು ತಾಲಿಬಾನ್‌ ಮುಖ್ಯ ವಕ್ತಾರ ಜಬಿಯುಲ್ಲಾ ಮುಜಾಹಿದ್ ತಿಳಿಸಿದ್ದಾನೆ.

ಅಮೆರಿಕದ ದಾಳಿಯನ್ನು ಆಡಳಿತಾರೂಢ ತಾಲಿಬಾನ್ ತೀವ್ರವಾಗಿ ಖಂಡಿಸುತ್ತದೆ. ದಾಳಿಯು ಅಂತರರಾಷ್ಟ್ರೀಯ ನಿಯಮಗಳ ಹಾಗೂ ಅಮೆರಿಕದ ಪಡೆಗಳನ್ನು ಅಫ್ಗಾನಿಸ್ತಾನದಿಂದ ವಾಪಸ್ ಕರೆಸಿಕೊಳ್ಳುವಾಗ ಮಾಡಿರುವ ಒಪ್ಪಂದಗಳ ಉಲ್ಲಂಘನೆಯಾಗಿದೆ ಎಂದು ಮುಜಾಹಿದ್ ಹೇಳಿದ್ದಾನೆ.

ಅಲ್‌ಕೈದಾ ಉಗ್ರ ಸಂಘಟನೆ ಮುಖ್ಯಸ್ಥ ಆಯ್ಮಾನ್ ಅಲ್‌ ಝವಾಹಿರಿಯನ್ನು ಶನಿವಾರ ಹತ್ಯೆ ಮಾಡಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಜೋ ಬೈಡನ್ ಘೋಷಿಸಿದ್ದಾರೆ. ಇದರ ಬೆನ್ನಲ್ಲೇ, ದಾಳಿಯನ್ನು ಖಂಡಿಸಿ ತಾಲಿಬಾನ್ ಹೇಳಿಕೆ ಬಿಡುಗಡೆ ಮಾಡಿದೆ.

ಅಫ್ಗಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿರುವ ನಿವಾಸದಲ್ಲಿ ಝವಾಹಿರಿಯನ್ನು ಹತ್ಯೆ ಮಾಡಲಾಗಿದೆ. ದಾಳಿಯಲ್ಲಿ ನಾಗರಿಕರ ಹತ್ಯೆಯಾಗಿಲ್ಲ ಎಂದು ಅಮೆರಿಕದ ಅಧಿಕಾರಿಗಳು ತಿಳಿಸಿದ್ದಾರೆ.

2001ರ ಸೆಪ್ಟೆಂಬರ್‌ 11ರಂದು ಅಮೆರಿಕದ ವಿಶ್ವ ವಾಣಿಜ್ಯ ಕೇಂದ್ರದ ಮೇಲೆ ನಡೆದಿದ್ದ ದಾಳಿಗೆ ಸಂಚು ಹೂಡಿದ್ದೂ ಸೇರಿದಂತೆ ಹಲವು ಭಯೋತ್ಪಾದಕ ಕೃತ್ಯಗಳನ್ನೆಸಗಿದ ಆರೋಪ ಝವಾಹಿರಿ ಮೇಲಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT