ಗುರುವಾರ , ಜುಲೈ 7, 2022
20 °C

ಕೀವ್‌ ತೊರೆದ ಭಾರತೀಯರು; ತೆರವು ಕಾರ್ಯಾಚರಣೆಗೆ 26 ವಿಮಾನಗಳ ಹಾರಾಟ: ಕೇಂದ್ರ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಯುದ್ಧಪೀಡಿತ ಉಕ್ರೇನ್‌ನ ಕೀವ್‌ನಲ್ಲಿ ಸಿಲುಕಿರುವ ಎಲ್ಲ ಭಾರತೀಯರು ರಾಜಧಾನಿಯನ್ನು ತೊರೆದಿದ್ದಾರೆ ಎಂದು ವಿದೇಶಾಂಗ ಸಚಿವಾಲಯದ ಕಾರ್ಯದರ್ಶಿ ಹರ್ಷವರ್ಧನ್ ಶೃಂಗ್ಲಾ ಮಾಹಿತಿ ನೀಡಿದ್ದಾರೆ.

ಮುಂದಿನ ಮೂರು ದಿನಗಳಲ್ಲಿ ಭಾರತೀಯರ ತೆರವು ಕಾರ್ಯಾಚರಣೆಗೆ 26 ವಿಮಾನಗಳ ಹಾರಾಟವನ್ನು ನಿಗದಿಪಡಿಸಲಾಗಿದೆ ಎಂದು ಅವರು ತಿಳಿಸಿದರು.

ಭಾರತೀಯ ವಾಯುಸೇನೆಯ ಸಿ-17 ವಿಮಾನಗಳನ್ನು ತೆರವಿಗೆ ಬಳಸುವ ಸಾಧ್ಯತೆಯಿದೆ. 

ರಷ್ಯಾ-ಉಕ್ರೇನ್ ಸಂಘರ್ಷದಲ್ಲಿ ಕರ್ನಾಟಕದ ವಿದ್ಯಾರ್ಥಿ ನವೀನ್‌ ಶೇಖರಪ್ಪ ಗ್ಯಾನಗೌಡರ್‌ ಮೃತಪಟ್ಟಿದ್ದಾರೆ. ಇದರಿಂದಾಗಿ 'ಆಪರೇಷನ್ ಗಂಗಾ' ಕಾರ್ಯಾಚರಣೆಯನ್ನು ಮತ್ತಷ್ಟು ತ್ವರಿತಗೊಳಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

ಹಾರ್ಕಿವ್ ಮತ್ತು ಇನ್ನಿತರ ಸಂಘರ್ಷ ವಲಯಗಳಲ್ಲಿ ಸಿಲುಕಿರುವ ಎಲ್ಲ ಭಾರತೀಯರ ಸುರಕ್ಷಿತ ತುರ್ತು ತೆರವಿಗೆ ರಷ್ಯಾ ಮತ್ತು ಉಕ್ರೇನ್ ರಾಯಭಾರಿಗಳಲ್ಲಿ ಬೇಡಿಕೆಯನ್ನು ಮುಂದಿರಿಸಿರುವುದಾಗಿ ಅವರು ಹೇಳಿದರು.

ರಷ್ಯಾ-ಉಕ್ರೇನ್ ಬಿಕ್ಕಟ್ಟಿನ ಕುರಿತು ನಡೆದ ಉನ್ನತ ಮಟ್ಟದ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಭಾರತೀಯನ ಸಾವಿನ ಬಗ್ಗೆ ಸಂತಾಪ ವ್ಯಕ್ತಪಡಿಸಿರುವುದಾಗಿ ತಿಳಿಸಿದರು.

ಪ್ರಧಾನಿ ಮೋದಿ ಅವರು ಫ್ರಾನ್ಸ್‌ ಹಾಗೂ ಪೊಲೆಂಡ್ ಅಧ್ಯಕ್ಷರ ಜೊತೆಗೆ ಮಾತುಕತೆ ನಡೆಸಿದ್ದಾರೆ.

ಈ ಮೊದಲು ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆಗೆ ವಾಯುಪಡೆ ನೆರವಾಗುವಂತೆ ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದ್ದರು.

ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯರ ತೆರವಿಗೆ ಭಾರತೀಯ ವಾಯುಪಡೆ ಕೂಡ ಕೈಜೋಡಿಸಬೇಕು ಎಂದು ಪ್ರಧಾನಿ ಮಂಗಳವಾರ ಮನವಿ ಮಾಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು