ಸಿರಿಯಾದಲ್ಲಿ ರಾಸಾಯನಿಕ ಶಸ್ತ್ರಾಸ್ತ್ರ: 'ಸಮಾಲೋಚನೆಯೊಂದಿಗೆ ಸಮಸ್ಯೆ ಬಗೆಹರಿಸಿ'

ವಿಶ್ವಸಂಸ್ಥೆ: ಸಿರಿಯಾದಲ್ಲಿ ರಾಸಾಯನಿಕ ಶಸ್ತ್ರಾಸ್ತ್ರಗಳ ಬಳಕೆಯ ಬಗ್ಗೆ ಇರುವ ಆರೋಪಗಳ ಕುರಿತು ಸಂಬಂಧಪಟ್ಟ ಎಲ್ಲರೊಂದಿಗೂ ಸಮಾಲೋಚಿಸಿ ಸಮಸ್ಯೆ ಬಗೆಹರಿಸುವ ಕಾಳಜಿ ತೋರಬೇಕು ಎಂದು ಭಾರತ ವಿಶ್ವಸಂಸ್ಥೆಗೆ ಒತ್ತಾಯಿಸಿದೆ.
‘ಈ ವಿಷಯದಲ್ಲಿ ರಾಜಕೀಯ ಬೆರೆಸಬಾರದು. ಹಾಗೆ ಮಾಡುವುದರಿಂದ ಯಾವುದೇ ರೀತಿಯ ಪ್ರಯೋಜನ ಆಗುವುದಿಲ್ಲ‘ ಎಂದು ಹೇಳಿದೆ.
ಮಂಗಳವಾರ ನಡೆದ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ವರ್ಚುವಲ್ ಸಭೆಯಲ್ಲಿ, ವಿಶ್ವಸಂಸ್ಥೆಯಲ್ಲಿನ ಭಾರತದ ಕಾಯಂ ಪ್ರತಿನಿಧಿ ಟಿ.ಎಸ್. ತಿರುಮೂರ್ತಿ ಅವರು ಮಾತನಾಡಿ, ‘ಸಿರಿಯಾದಲ್ಲಿ ರಾಸಾಯನಿಕ ಶಸ್ತ್ರಾಸ್ತ್ರಗಳ ಬಳಕೆಯ ಆರೋಪ ಕುರಿತು ತನಿಖೆ ನಡೆಯುತ್ತಿದೆ. ಈ ತನಿಖೆ ನಿಷ್ಪಕ್ಷಪಾತವಾಗಿ ನಡೆಯಬೇಕೆಂದು’ ಎಂದು ಒತ್ತಿ ಹೇಳಿದರು.
ಸಿರಿಯಾದಲ್ಲಿ ದಶಕಗಳ ಕಾಲ ನಡೆದ ಸಂಘರ್ಷದ ಲಾಭವನ್ನು ಭಯೋತ್ಪಾದಕ ಗುಂಪುಗಳು ಪಡೆದುಕೊಂಡಿವೆ. ಇವು, ಇಡೀ ಪ್ರದೇಶಕ್ಕೆ ಅಪಾಯ ಉಂಟುಮಾಡುತ್ತಿವೆ ಎಂದು ಅವರು ಇದೇ ವೇಳೆ ತಿಳಿಸಿದರು.
ಈ ವಿಷಯವನ್ನು ರಾಜಕೀಯಗೊಳಿಸುವುದರಿಂದ ಪ್ರಯೋಜನವಿಲ್ಲ. ಹಾಗಾಗಿ, ಸಂಬಂಧಿಸಿದವರು ಸಮಾಲೋಚನೆ ನಡೆಸುವ ಮೂಲಕ ಸಮಸ್ಯೆ ಇತ್ಯರ್ಥಗೊಳಿಸಲು ಪ್ರಯತ್ನಿಸಬೇಕು ಎಂದು ತಿರುಮೂರ್ತಿ ಪ್ರತಿಪಾದಿಸಿದರು.
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.