ಭಾನುವಾರ, ಜೂನ್ 20, 2021
20 °C

ಅಮೆರಿಕ: ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಸಹೋದರ ರಾಬರ್ಟ್‌ ಟ್ರಂಪ್‌ ನಿಧನ

ಏಜೆನ್ಸೀಸ್‌ Updated:

ಅಕ್ಷರ ಗಾತ್ರ : | |

ವಾಷಿಂಗ್ಟನ್‌: ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಅವರ ಕಿರಿಯ ಸಹೋದರ ರಾಬರ್ಟ್‌ ಟ್ರಂಪ್‌ ಅವರು ಶನಿವಾರ ರಾತ್ರಿ ನಿಧನರಾದರು.

ಅವರಿಗೆ 71 ವರ್ಷ ವಯಸ್ಸಾಗಿತ್ತು. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ನ್ಯೂರ್ಯಾರ್ಕ್‌ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೇ ಅವರು ನಿಧನರಾದರು ಎಂದು ಶ್ವೇತಭವನದ ಅಧಿಕಾರಿಗಳು ತಿಳಿಸಿದ್ದಾರೆ. ಆದರೆ ಅನಾರೋಗ್ಯದ ಕಾರಣಗಳು ಬಹಿರಂಗಗೊಂಡಿಲ್ಲ.

ಡೊನಾಲ್ಡ್‌ ಟ್ರಂಪ್‌ ಅವರು ಶುಕ್ರವಾರ ಆಸ್ಪತ್ರೆಗೆ ಭೇಟಿ ನೀಡಿ ರಾಬರ್ಟ್‌ ಟ್ರಂಪ್‌ ಅವರ ಆರೋಗ್ಯ ವಿಚಾರಿಸಿದ್ದರು. ನನ್ನ ಪ್ರೀತಿಯ ಸಹೋದರ ರಾಬರ್ಟ್‌ ನಿಧನರಾಗಿದ್ದಾರೆ, ಅವನು ನನಗೆ ಸೋದರ ಮಾತ್ರವಲ್ಲ, ನನಗೆ ಅತ್ಯುತ್ತಮ ಗೆಳೆಯನಾಗಿದ್ದ, ಅವನ ನೆನಪುಗಳು ನಮ್ಮ ಮನದಲ್ಲಿ ಅಚ್ಚಳಿಯದೇ ಉಳಿದಿವೆ, ನಾನು ಮತ್ತೆ ಅವನನ್ನು ಭೇಟಿ ಮಾಡುವೆ, ಅವನ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಟ್ರಂಪ್‌ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು