ಇಸ್ಲಮಾಬಾದ್: ‘ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಮೇಲೆ ಮತ್ತೊಂದು ಹತ್ಯೆ ಪ್ರಯತ್ನ ನಡೆಯಬಹುದು. ಈ ಬೆದರಿಕೆ ಕುರಿತು ಗಮನಹರಿಸಬೇಕಾದುದು ಸರ್ಕಾರದ ಜವಾಬ್ದಾರಿ’ ಎಂದು ಇಸ್ಲಮಾಬಾದ್ ಹೈಕೋರ್ಟ್ ಶುಕ್ರವಾರ ಹೇಳಿದೆ.
ಇಮ್ರಾನ್ ಖಾನ್ ಅವರ ಪಾಕಿಸ್ತಾನ್ ತೆಹ್ರೀಕ್– ಇ– ಇನ್ಸಾಫ್ ಪಕ್ಷದಿಂದ ನಡೆಸಲಾಗುತ್ತಿರುವ ಪ್ರತಿಭಟನೆಯಿಂದ ರಸ್ತೆಗಳು ಮುಚ್ಚಿವೆ. ಇದರಿಂದ ತೊಂದರೆ ಆಗುತ್ತಿದೆ ಎಂದು ವ್ಯಾಪಾರಸ್ಥರು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ವೇಳೆ ಮುಖ್ಯ ನ್ಯಾಯಮೂರ್ತಿಆಮೀರ್ ಫಾರೂಕ್ ಅವರು ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಗುಪ್ತಚರ ವರದಿಯನ್ನು ಆಧರಿಸಿ ಮುಖ್ಯ ನ್ಯಾಯಮೂರ್ತಿ ಅವರು ಹೀಗೆ ಹೇಳಿದ್ದಾರೆ ಎಂದು ಡಾನ್ ಪತ್ರಿಕೆ ವರದಿ ಮಾಡಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.