ಸೋಮವಾರ, ಅಕ್ಟೋಬರ್ 18, 2021
22 °C

ನಟ ಅನುಪಮ್‌ ಖೇರ್‌ಗೆ ಅಮೆರಿಕ ಹಿಂದೂ ವಿ.ವಿ ಗೌರವ ಡಾಕ್ಟರೇಟ್

ಪಿಟಿಐ Updated:

ಅಕ್ಷರ ಗಾತ್ರ : | |

ನ್ಯೂಯಾರ್ಕ್‌: ಫ್ಲಾರಿಡಾ ಮೂಲದ ಹಿಂದೂ ಯೂನಿವರ್ಸಿಟಿ ಆಫ್‌ ಅಮೆರಿಕ, ಬಾಲಿವುಡ್‌ ನಟ ಅನುಪಮ್‌ ಖೇರ್‌ ಅವರಿಗೆ ಗೌರವ ಡಾಕ್ಟರೇಟ್‌ ಪ್ರದಾನ ಮಾಡಿದೆ.

ಹಿಂದೂ ಧರ್ಮ ಕುರಿತು ಖೇರ್‌ ಅವರು ಕೈಗೊಂಡ ಅಧ್ಯಯನವನ್ನು ಪರಿಗಣಿಸಿ ಈ ಗೌರವ ನೀಡಲಾಗಿದೆ. ಶನಿವಾರ ನಡೆದ ಕಾರ್ಯಕ್ರಮದಲ್ಲಿ ಈ ಗೌರವ ಪದವಿ ಪ್ರದಾನ ಮಾಡಲಾಯಿತು ಎಂದು ಮೂಲಗಳು ಹೇಳಿವೆ.

‘ಈ ಗೌರವ ಡಾಕ್ಟರೇಟ್‌ ಸ್ವೀಕರಿಸಿದ್ದಕ್ಕೆ ಸಂತಸವಾಗಿದೆ. ನನ್ನ ಜೀವನದ ಪ್ರಮುಖ ಸಾಧನೆಗಳಲ್ಲಿ ಈ ಪದವಿಗೆ ಅತ್ಯಂತ ಎತ್ತರದ ಸ್ಥಾನವಿದೆ. ಜಗತ್ತಿನ ಅತ್ಯಂತ ಪುರಾತನ ಸಂಸ್ಕೃತಿಯಾಗಿರುವ ಹಿಂದೂ ಧರ್ಮದ ತತ್ವಜ್ಞಾನ ಕುರಿತು ಮಾತನಾಡಲು ಈ ಪದವಿ ನನಗೆ ವೇದಿಕೆ ಒದಗಿಸಿದಂತಾಗಿದೆ’ ಎಂದು ಖೇರ್‌ ಅವರು ಪಿಟಿಐ ಸುದ್ದಿಸಂಸ್ಥೆಗೆ ಪ್ರತಿಕ್ರಿಯಿಸಿದ್ದಾರೆ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು