ಶನಿವಾರ, ಜೂನ್ 19, 2021
26 °C

ಸಂಘರ್ಷ ಬಿಟ್ಟು, ಮಾತುಕತೆಯಿಂದ ಸಮಸ್ಯೆ ಪರಿಹರಿಸಿಕೊಳ್ಳುವುದು ಅವಶ್ಯ: ಗುಟೆರಸ್

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ವಿಶ್ವಸಂಸ್ಥೆ: ‘ಯಾವುದೇ ದೇಶಗಳ ಸೇನೆಗಳು ಪರಸ್ಪರ ಸಂಘರ್ಷಕ್ಕಿಳಿಯುವುದು ವಿಪತ್ತಿಗೆ ಕಾರಣವಾಗುತ್ತದೆ. ಈ ಹಿನ್ನೆಲೆಯಲ್ಲಿ ಭಾರತ ಮತ್ತು ಪಾಕಿಸ್ತಾನಗಳು ತಮ್ಮ ನಡುವಿನ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಗಂಭೀರವಾಗಿ ಚರ್ಚಿಸುವುದು ಅವಶ್ಯಕವಾಗಿದೆ’ ಎಂದು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೊನಿಯೊ ಗುಟೆರಸ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಕಾಶ್ಮೀರದಲ್ಲಿ ಈಗಿರುವ ಪರಿಸ್ಥಿತಿಯನ್ನು ಉಲ್ಲೇಖಿಸಿ ಭಾರತ ಮತ್ತು ಪಾಕಿಸ್ತಾನ ನಡುವೆ ಉಂಟಾಗಿರುವ ಉದ್ವಿಗ್ನ ಸ್ಥಿತಿ ಕುರಿತು ಪಾಕಿಸ್ತಾನದ ಪತ್ರಕರ್ತರು ಕೇಳಿದ ಪ್ರಶ್ನೆಗೆ ಗುಟೆರಸ್ ಈ ರೀತಿ ಪ್ರತಿಕ್ರಿಯಿಸಿದರು.

‘ನೀವು ಪ್ರಸ್ತಾಪಿಸಿದ ಎಲ್ಲಾ ಪ್ರಾಂತ್ಯಗಳಲ್ಲಿ ಮಾನವ ಹಕ್ಕುಗಳನ್ನು ಸಂಪೂರ್ಣವಾಗಿ ಗೌರವಿಸುವುದು ಅತ್ಯಗತ್ಯ’ ಎಂದು ಹೇಳಿದರು.

‘ಸೇನೆ ಬಳಸದೇ ಸಮಸ್ಯೆಗಳಿಗೆ ಶಾಂತಿಯುತ ಪರಿಹಾರ ಕಂಡುಕೊಳ್ಳಬೇಕೆಂಬುದು ನಮ್ಮ ಒತ್ತಾಯವಾಗಿದೆ. ಪಾಕಿಸ್ತಾನ ಮತ್ತು ಭಾರತದ ನಡುವಿನ ವಿಚಾರವನ್ನು ಗಮನಿಸಿದರೆ, ಸೇನೆಗಳ ಬಳಕೆಯಿಂದ ಅಪಾಯ ಸಂಭವಿಸುವುದು ಸ್ಪಷ್ಟವಾಗಿದೆ. ಇದರಿಂದ ಆ ಎರಡು ದೇಶಕ್ಕಲ್ಲದೇ, ವಿಶ್ವಕ್ಕೇ ತೊಂದರೆಯಾಗಲಿದೆ‘ ಎಂದು ಹೇಳಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು