ಮಂಗಳವಾರ, ಏಪ್ರಿಲ್ 13, 2021
24 °C

ಕ್ಯಾಪಿಟಲ್‌ ದಾಳಿ: ಆರೋಪಿಯ ಮಾನಸಿಕ ಆರೋಗ್ಯದ ಬಗ್ಗೆ ವಿಚಾರಣೆ

ಎಪಿ Updated:

ಅಕ್ಷರ ಗಾತ್ರ : | |

Prajavani

ವಾಷಿಂಗ್ಟನ್‌: ‘ಅಮೆರಿಕದ ಕ್ಯಾಪಿಟಲ್‌ ಕಟ್ಟಡದ ಬಳಿ ಕಾರನ್ನು ವೇಗವಾಗಿ ನುಗ್ಗಿಸಿ ಪೊಲೀಸ್‌ ಅಧಿಕಾರಿಯೊಬ್ಬರ ಸಾವಿಗೆ ಕಾರಣನಾದ ಕಾರಿನ ಚಾಲಕ ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದ ಎಂದು ತಿಳಿದು ಬಂದಿದೆ.

ಘಟನೆಯಲ್ಲಿ ಕಾರಿನ ಚಾಲಕನನ್ನು ಭದ್ರತಾ ಸಿಬ್ಬಂದಿ ಗುಂಡಿಕ್ಕಿ ಕೊಂದಿದ್ದರು. ಆದರೆ ಈ ವ್ಯಕ್ತಿಯು ಭ್ರಮೆ, ಆತ್ಮಹತ್ಯೆಯ ಚಿಂತನೆಯಂತಹ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ’ ಎಂದು ಅಮೆರಿಕದ ಅಧಿಕಾರಿಯೊಬ್ಬರು ತಿಳಿಸಿದರು.

‘ಮಾನಸಿಕ ಸ್ಥಿತಿ ಸರಿಯಿಲ್ಲದ ಯುವಕನಿಂದ ಸಂಭವಿಸಿದ ಅಪಘಾತವಾಗಿದೆ’ ಎಂದು ತನಿಖಾ ಅಧಿಕಾರಿಗಳು ಹೇಳಿದರು.

‘ಶುಕ್ರವಾರ ಮಧ್ಯಾಹ್ನ ಈ ಘಟನೆ ನಡೆದಿತ್ತು.  ಶಂಕಿತನನ್ನು 25 ವರ್ಷದ ನೋಹಾ ಗ್ರೀನ್‌ ಎಂದು ಗುರುತಿಸಲಾಗಿದೆ’ ಎಂದು ಕ್ಯಾಪಿಟಲ್ ಪೊಲೀಸ್ ಮುಖ್ಯಸ್ಥ ಯೋಗಾನಂದ ಪಿಟ್‌ಮ್ಯಾನ್ ಅವರು ಮಾಹಿತಿ ನೀಡಿದರು.

‘ತನಿಖಾಧಿಕಾರಿಗಳು ದಾಳಿಯ ಹಿಂದಿನ ಕಾರಣವನ್ನು ಪತ್ತೆ ಹಚ್ಚಲು ಪ್ರಯತ್ನಿಸುತ್ತಿದ್ದಾರೆ. ಆದರೆ ಅವರು ನೋಹಾ ಗ್ರೀನ್‌ನ ಮಾನಸಿಕ ಆರೋಗ್ಯದ ಮೇಲೆ ಹೆಚ್ಚಿನ ಗಮನವಹಿಸಿದ್ದಾರೆ. ಗ್ರೀನ್‌ ಅವರ ಕುಟುಂಬದವರನ್ನು ವಿಚಾರಣೆಗೆ ಒಳಪಡಿಸಲಾಯಿತು. ಈ ವೇಳೆ ಅವರು ನೋಹಾ ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದ ಎಂಬುದರ ಬಗ್ಗೆ ಮಾಹಿತಿ ನೀಡಿದರು’ ಎಂದು ಅಧಿಕಾರಿಯೊಬ್ಬರು ತಿಳಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು