ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಫ್‌ಬಿಐ ಕಚೇರಿಗೆ ನುಗ್ಗಲು ಯತ್ನಿಸಿದ ಶಸ್ತ್ರಧಾರಿಯ ಹತ್ಯೆ

Last Updated 12 ಆಗಸ್ಟ್ 2022, 11:51 IST
ಅಕ್ಷರ ಗಾತ್ರ

ವಿಲ್ಮಿಂಗ್ಟನ್(ಅಮೆರಿಕ): ಇಲ್ಲಿನ ಸಿನ್ಸಿನಾಟಿಯಲ್ಲಿರುವ ಎಫ್‌ಬಿಐ ಕಚೇರಿಗೆ ನುಗ್ಗಲು ಯತ್ನಿಸಿದ ಶಸ್ತ್ರಧಾರಿ ವ್ಯಕ್ತಿಯೊಬ್ಬನನ್ನು ಗಂಡು ಹಾರಿಸಿ ಹತ್ಯೆಗೈಯಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ರಿಕಿ ಶಿಫರ್(42) ಮೃತ ವ್ಯಕ್ತಿ. ಈತ ಈ ಹಿಂದೆ ಯಾವುದೇ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿರುವ ಬಗ್ಗೆ ಮಾಹಿತಿ ಇಲ್ಲ. ಉಗ್ರ ಸಂಘಟನೆಗಳ ಜೊತೆ ಈತನಿಗೆ ಸಂಬಂಧವಿದೆಯೇ ಎಂಬುದರ ಬಗ್ಗೆಯೂ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಿಕಿ ಶಿಫರ್ ಎಫ್‌ಬಿಐ ಕಚೇರಿಯ ಸಂದರ್ಶಕರ ಕೋಣೆಗೆ ನುಗ್ಗಲು ಯತ್ನಿಸಿದ್ದಾನೆ. ಅಧಿಕಾರಿಗಳು ಆತನನ್ನು ತಡೆಯಲು ಯತ್ನಿಸಿದಾಗ ಅಲ್ಲಿಂದ ಕಾರಿನಲ್ಲಿ ಪರಾರಿಯಾಗಿದ್ದಾನೆ. ಪೊಲೀಸರು ಆತನನ್ನು ಹಿಂಬಾಲಿಸಿದಾಗ ಕಾರಿನಿಂದಿಳಿದು ಗುಂಡಿನ ದಾಳಿ ನಡೆಸಿದ್ದಾನೆ. ಆಗ ಪ್ರತಿದಾಳಿ ನಡೆಸಿ ಆತನನ್ನು ಹತ್ಯೆಗೈಯ್ಯಲಾಗಿದೆ ಎಂದೂ ವಿವರಿಸಿದ್ದಾರೆ.

ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರಿಗೆ ಸೇರಿದ, ಫ್ಲಾರಿಡಾದಲ್ಲಿರುವ ಕ್ಲಬ್‌ ಹಾಗೂ ನಿವಾಸದ ಮೇಲೆ ಎಫ್‌ಬಿಐ ಅಧಿಕಾರಿಗಳು ಈಚೆಗೆ ಶೋಧ ನಡೆಸಿದ ಬಳಿಕ ಎಫ್‌ಬಿಐ ವಿರುದ್ಧ ದಾಳಿ ನಡೆಯುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT