ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೆಕ್ಸಿಕೊ: ಜೈಲಿನ ಮೇಲೆ ಸಶಸ್ತ್ರ ದಾಳಿ, 14 ಮಂದಿ ಸಾವು

Last Updated 2 ಜನವರಿ 2023, 15:36 IST
ಅಕ್ಷರ ಗಾತ್ರ

ಮೆಕ್ಸಿಕೊ ಸಿಟಿ: ಮೆಕ್ಸಿಕೊದ ಗಡಿನಗರ ಜುವಾರೆಜ್‌ನಲ್ಲಿರುವ ಜೈಲಿನಲ್ಲಿ ನಡೆದ ಸಶಸ್ತ್ರ ದಾಳಿಯಲ್ಲಿ ಕನಿಷ್ಠ 14 ಮಂದಿ ಹಾಗೂ ನಗರದ ಮತ್ತೊಂದೆಡೆ ನಡೆದ ದಾಳಿಯಲ್ಲಿ ಇಬ್ಬರು ಚಾಲಕರು ಸಾವಿಗೀಡಾಗಿದ್ದಾರೆ ಎಂದು ಮೆಕ್ಸಿಕೊದ ಅಧಿಕಾರಿಗಳು ತಿಳಿಸಿದ್ದಾರೆ.

ಜೈಲಿನಲ್ಲಿ ನಡೆದ ದಾಳಿಯಲ್ಲಿ ಸಾವಿಗೀಡಾಗಿದವರಲ್ಲಿ 10 ಮಂದಿ ಭದ್ರತಾ ಸಿಬ್ಬಂದಿ ಹಾಗೂ ನಾಲ್ವರು ಕೈದಿಗಳು ಇದ್ದಾರೆ. ದಾಳಿಯಲ್ಲಿ 13 ಮಂದಿ ಗಾಯಗೊಂಡಿದ್ದು, 24 ಮಂದಿ ಪಾರಾಗಿದ್ದಾರೆ ಎಂದು ಚಿಹೋವಾ ರಾಜ್ಯದ ಪ್ರಾಸಿಕ್ಯೂಟರ್ ಮಾಹಿತಿ ನೀಡಿದ್ದಾರೆ.

ದಾಳಿಕೋರರು ಸ್ಥಳೀಯ ಕಾಲಮಾನ ಬೆಳಿಗ್ಗೆ 7 ಗಂಟೆಗೆ ಶಸ್ತ್ರಸಜ್ಜಿತ ವಾಹನಗಳಲ್ಲಿ ಜೈಲಿಗೆ ಬಂದು ಗುಂಡಿನ ದಾಳಿ ನಡೆಸಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಆದರೆ, ದಾಳಿ ನಡೆಸಿದವರು ಯಾರು ಎಂಬುದು ತಕ್ಷಣಕ್ಕೆ ತಿಳಿದುಬಂದಿಲ್ಲ ಎಂದೂ ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT