ಬೀಜಿಂಗ್: ‘ಚೀನಾದ ಪೂರ್ವ ಭಾಗದಲ್ಲಿರುವ ಸುಜಾಹೌನಲ್ಲಿ ಹೋಟೆಲ್‌ವೊಂದು ಕುಸಿದು ಕನಿಷ್ಠ 8 ಮಂದಿ ಮೃತಪಟ್ಟಿದ್ದಾರೆ. 9 ಮಂದಿ ನಾಪತ್ತೆಯಾಗಿದ್ದಾರೆ’ ಎಂದು ಅಧಿಕಾರಿಗಳು ತಿಳಿಸಿದರು.
‘ಸೋಮವಾರ ಮಧ್ಯಾಹ್ನ ಹೋಟೆಲ್ ಕಟ್ಟಡ ಕುಸಿದಿದೆ. ಇಲ್ಲಿ ರಕ್ಷಣಾ ಕಾರ್ಯಾಚರಣೆಯನ್ನು ನಡೆಸಲಾಗುತ್ತಿದೆ’ ಎಂದು ಸುಜಾಹೌ ಆಡಳಿತ ಫೇಸ್‌ಬುಕ್‌ನಲ್ಲಿ ಹೇಳಿದೆ.
‘ಕಟ್ಟಡದ ಅವಶೇಷಗಳಡಿ ಸಿಲುಕಿದ್ದ 23 ಮಂದಿಯ ಪೈಕಿ ಆರು ಮಂದಿಯನ್ನು ರಕ್ಷಿಸಲಾಗಿದೆ. 8 ಮಂದಿ ಮೃತಪಟ್ಟಿದ್ದು, 9 ಮಂದಿ ನಾಪತ್ತೆಯಾಗಿದ್ದಾರೆ’ ಎಂದು ಅಧಿಕಾರಿಗಳು ತಿಳಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.