ಗುರುವಾರ , ಸೆಪ್ಟೆಂಬರ್ 23, 2021
27 °C

ಆಸ್ಟ್ರೇಲಿಯಾ: ಬ್ರಿಸ್ಬೇನ್‌ನಲ್ಲಿ ಲಾಕ್‌ಡೌನ್‌ ವಿಸ್ತರಣೆ

ಎಪಿ Updated:

ಅಕ್ಷರ ಗಾತ್ರ : | |

Prajavani

ಬ್ರಿಸ್ಬೇನ್: ಆಸ್ಟ್ರೇಲಿಯಾದಲ್ಲಿ ಕೋವಿಡ್‌ ಉಲ್ಬಣಗೊಳ್ಳುತ್ತಿದ್ದು, ಈ ಹಿನ್ನೆಲೆಯಲ್ಲಿ ಬ್ರಿಸ್ಬೇನ್‌ನಲ್ಲಿ ಈಗಾಗಲೇ ಹೇರಲಾಗಿರುವ ಲಾಕ್‌ಡೌನ್‌ ಅನ್ನು ಭಾನುವಾರದವರೆಗೆ ವಿಸ್ತರಿಸಲಾಗಿದೆ.

ಕ್ವೀನ್ಸ್‌ಲ್ಯಾಂಡ್ ರಾಜ್ಯದ ಬ್ರಿಸ್ಬೇನ್ ಮತ್ತು ಸುತ್ತಮುತ್ತಲಿನ ಕೆಲವು ಪ್ರದೇಶಗಳಲ್ಲಿ ನಾಳೆ ಲಾಕ್‌ಡೌನ್‌ ಅಂತ್ಯಗೊಳ್ಳಬೇಕಾಗಿತ್ತು. ಆದರೆ ಕಳೆದ 24 ಗಂಟೆಗಳಲ್ಲಿ ಡೆಲ್ಟಾ ರೂಪಾಂತರ ತಳಿಯ 13 ಪ್ರಕರಣಗಳು ವರದಿಯಾಗಿವೆ. ಈ ಹಿನ್ನೆಲೆಯಲ್ಲಿ ಲಾಕ್‌ಡೌನ್‌ ಅನ್ನು ಭಾನುವಾರದವರೆಗೆ ವಿಸ್ತರಿಸಲಾಗಿದೆ.

ಆಸ್ಟ್ರೇಲಿಯಾದ ನ್ಯೂ ಸೌತ್ ವೇಲ್ಸ್‌ ರಾಜ್ಯದಲ್ಲಿರುವ ಸಿಡ್ನಿ ಮತ್ತು ಸುತ್ತಮುತ್ತಲಿನ ನಗರದಲ್ಲಿ ಈಗಾಗಲೇ ಆರು ವಾರಗಳ ಲಾಕ್‌ಡೌನ್‌ ಹೇರಲಾಗಿದೆ. ನ್ಯೂ ಸೌತ್‌ ವೇಲ್ಸ್‌ನಲ್ಲಿ  ಸ್ಥಳೀಯವಾಗಿ ಪ್ರಸರಣಗೊಂಡ 207 ಹೊಸ ಪ್ರಕರಣಗಳು ವರದಿಯಾಗಿವೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು