ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಕ್ರೇನ್‌ ಸಂಘರ್ಷ | ರಷ್ಯಾದ ಉದ್ಯಮಗಳ ಮೇಲೆ ಹೆಚ್ಚಿನ ನಿರ್ಬಂಧ: ಆಸ್ಟ್ರೇಲಿಯಾ

Last Updated 14 ಏಪ್ರಿಲ್ 2022, 2:23 IST
ಅಕ್ಷರ ಗಾತ್ರ

ಸಿಡ್ನಿ: ಉಕ್ರೇನ್‌ ಮೇಲೆ ರಷ್ಯಾ ನಡೆಸುತ್ತಿರುವ ಸೇನಾ ಕಾರ್ಯಾಚರಣೆಯನ್ನು ಆಸ್ಟ್ರೇಲಿಯಾ ತೀವ್ರವಾಗಿ ಖಂಡಿಸಿದೆ.

ರಕ್ಷಣಾ ವಲಯಕ್ಕೆ ಸಂಬಂಧಿತ ಘಟಕಗಳು ಮತ್ತು ಹಡಗು ಕಂಪನಿಗಳು ಸೇರಿದಂತೆ ರಷ್ಯಾದ 14 ಸರ್ಕಾರಿ ಸ್ವಾಮ್ಯದ ಉದ್ಯಮಗಳ ಮೇಲೆ ಹಣಕಾಸು ನಿರ್ಬಂಧಗಳನ್ನು ವಿಧಿಸಲಾಗಿದೆ ಎಂದು ಆಸ್ಟ್ರೇಲಿಯಾ ತಿಳಿಸಿದೆ.

ರಷ್ಯಾದ ಎಲ್ಲಾ ಎಲೆಕ್ಟ್ರಾನಿಕ್ಸ್ ಘಟಕಗಳ ಸುಮಾರು ಶೇ 80ರಷ್ಟು ಉತ್ಪಾದನೆಗೆ ಕಾರಣವಾದ ಎಲೆಕ್ಟ್ರಾನಿಕ್ಸ್ ಕಂಪನಿ ರುಸೆಲೆಕ್ಟ್ರಾನಿಕ್ಸ್ ಮತ್ತು ರೈಲ್ವೆ ವಲಯದ ಮೇಲೆ ಮತ್ತಷ್ಟು ನಿರ್ಬಂಧಗಳನ್ನು ವಿಸ್ತರಿಸಲಾಗುವುದು ಎಂದು ವಿದೇಶಾಂಗ ಸಚಿವ ಮಾರಿಸ್ ಪೇನ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಉಕ್ರೇನ್‌ನಲ್ಲಿ ವಿಶೇಷ ಸೇನಾ ಕಾರ್ಯಾಚರಣೆಯನ್ನು ಆರಂಭಿಸಿದ್ದಲ್ಲದೇ, ಸೈನಿಕರು ಮತ್ತು ನಾಗರಿಕರ ಸಾವಿಗೆ ಉಕ್ರೇನ್‌ ಅನ್ನು ದೂಷಿಸಿರುವ ರಷ್ಯಾ ನಿಲುವಿಗೆ ಆಸ್ಟ್ರೇಲಿಯಾ ಆಕ್ಷೇಪ ವ್ಯಕ್ತಪಡಿಸಿದೆ.

ರಷ್ಯಾ- ಉಕ್ರೇನ್ ಸಂಘರ್ಷ ಪ್ರಾರಂಭವಾದಾಗಿನಿಂದ 600ಕ್ಕೂ ಹೆಚ್ಚು ವ್ಯಕ್ತಿಗಳು ಸೇರಿದಂತೆ ಬ್ಯಾಂಕಿಂಗ್ ವಲಯದ ಮೇಲೆ ಆಸ್ಟ್ರೇಲಿಯಾ ನಿರ್ಬಂಧಗಳನ್ನು ವಿಧಿಸಿದೆ.

ಸಂಕಷ್ಟದಲ್ಲಿರುವ ಉಕ್ರೇನ್‌ಗೆ ರಕ್ಷಣಾ ಉಪಕರಣಗಳು ಸೇರಿದಂತೆ ಅಗತ್ಯ ವಸ್ತುಗಳನ್ನು ಆಸ್ಟ್ರೇಲಿಯಾ ಸರಬರಾಜು ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT