ಮಂಗಳವಾರ, ಆಗಸ್ಟ್ 3, 2021
26 °C
ಸಿಡ್ನಿಯಲ್ಲಿ 3ನೇ ವಾರವೂ ಮುಂದುವರಿದ ಲಾಕ್‌ಡೌನ್

ಆಸ್ಟ್ರೇಲಿಯಾ: ಕೋವಿಡ್‌ಗೆ ವರ್ಷದ ಮೊದಲ ಬಲಿ

ಎಎಫ್‌ಪಿ Updated:

ಅಕ್ಷರ ಗಾತ್ರ : | |

Prajavani

ಸಿಡ್ನಿ: ಆಸ್ಟ್ರೇಲಿಯಾದಲ್ಲಿ 90 ವರ್ಷದ ವೃದ್ಧೆಯೊಬ್ಬರು ಕೋವಿಡ್‌ನಿಂದಾಗಿ ಶನಿವಾರ ಮೃತಪಟ್ಟಿದ್ಧಾರೆ. ಇದು ಈ ವರ್ಷ ಸೋಂಕಿನಿಂದಾಗಿ ಸಂಭವಿಸಿದ ಮೊದಲ ಸಾವು.

ಸಿಡ್ನಿಯಲ್ಲಿ ಡೆಲ್ಟಾ ರೂಪಾಂತರ ತಳಿಯು ವೇಗವಾಗಿ ಹರಡುತ್ತಿದೆ. ಈ ನಡುವೆ ಮಹಿಳೆಯೊಬ್ಬರು ಸೋಂಕು ದೃಢಗೊಂಡ ಕೆಲವು ಗಂಟೆಗಳ ಬಳಿಕ ಸಾವಿಗೀಡಾಗಿದ್ದಾರೆ.

‘ನಗರದಲ್ಲಿ 77 ಹೊಸ ಪ್ರಕರಣಗಳು ವರದಿಯಾಗಿವೆ. ಸೋಮವಾರದ ವೇಳೆಗೆ ಈ ಸಂಖ್ಯೆಯು 100ಕ್ಕೆ ಏರಿಕೆಯಾಗುವ ಸಾಧ್ಯತೆಗಳಿವೆ’ ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ಧಾರೆ.

‘ಮುಂದಿನ ದಿನಗಳಲ್ಲಿ ಪರಿಸ್ಥಿತಿ ಇನ್ನಷ್ಟು ಹದಗೆಡಲಿದೆ’ ಎಂದು ನ್ಯೂಸೌತ್ ವೆಲ್ಸ್‌ ರಾಜ್ಯದ ಮುಖ್ಯಸ್ಥೆ ಗ್ಲಾಡಿಸ್ ಬೆರೆಜಿಕ್ಲಿಯನ್ ಅವರು ಹೇಳಿದ್ದಾರೆ.

ಸಿಡ್ನಿಯಲ್ಲಿ ಮೂರನೇ ವಾರವೂ ಲಾಕ್‌ಡೌನ್‌ ಮುಂದುವರಿದಿದೆ. ಆದರೂ ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗಿದೆ. ಲಸಿಕೆ ಪಡೆಯದ ಜನರಲ್ಲಿ ಸೋಂಕು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ.

‘ಶುಕ್ರವಾರ ಲಾಕ್‌ಡೌನ್ ನಿಯಮವನ್ನು ಇನ್ನಷ್ಟು ಕಠಿಣಗೊಳಿಸಲಾಗಿದೆ. ಜನರಿಗೆ ಮನೆಯಿಂದ ಹೊರಗೆ ಬರದಂತೆ ಸೂಚಿಸಲಾಗಿದೆ. ಸೋಂಕು ನಿಯಂತ್ರಣಕ್ಕೆ ಬರುವವರೆಗೆ ಈ ನಿಯಮ ಜಾರಿಯಲ್ಲಿ ಇರಲಿದೆ’ ಎಂದು ಬೆರೆಜಿಕ್ಲಿಯನ್ ಅವರು ತಿಳಿಸಿದ್ದಾರೆ.

ಸಿಡ್ನಿಯಲ್ಲಿ ಜೂನ್‌ ತಿಂಗಳಲ್ಲಿ ಪ್ರಕರಣಗಳಲ್ಲಿ ಏರಿಕೆ ಕಂಡು ಬಂದಿದೆ. ಈ ಬಳಿಕ ಇಲ್ಲಿ 566 ಹೊಸ ಪ್ರಕರಣಗಳು ವರದಿಯಾಗಿವೆ.

ಆಸ್ಟ್ರೇಲಿಯಾದಲ್ಲಿ ಈವರೆಗೆ 31,000 ಪ್ರಕರಣಗಳು ವರದಿಯಾಗಿದ್ದು, 911 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು