ಮಂಗಳವಾರ, ಜನವರಿ 19, 2021
21 °C

ಕೊರೊನಾ: ಬ್ರಿಸ್ಬೇನ್‌ ನಗರದಲ್ಲಿ ಮೂರು ದಿನಗಳ ಲಾಕ್‌ಡೌನ್‌

ಎಪಿ Updated:

ಅಕ್ಷರ ಗಾತ್ರ : | |

Prajavani

ಬ್ರಿಸ್ಬೇನ್‌: ಆಸ್ಟ್ರೇಲಿಯಾದ ಮೂರನೇ ಅತಿ ದೊಡ್ಡ ನಗರ ಬ್ರಿಸ್ಬೇನ್‌ನಲ್ಲಿ ರೂಪಾಂತರಗೊಂಡ ಕೊರೊನಾ ವೈರಾಣು ಪತ್ತೆಯಾಗಿದೆ. ಹಾಗಾಗಿ ಬ್ರಿಸ್ಬೇನ್‌ನಲ್ಲಿ ಶುಕ್ರವಾರದಿಂದ ಮೂರು ದಿನಗಳ ಲಾಕ್‌ಡೌನ್‌ ಘೋಷಿಸಲಾಗಿದೆ.

‘ಇದೇ ಮೊದಲ ಬಾರಿ ಬ್ರಿಸ್ಬೇನ್‌ ಮತ್ತು ಸುತ್ತಮುತ್ತಲಿನ ಕೆಲ ನಗರಗಳ ಸ್ಥಳೀಯ ಆಡಳಿತಗಳು, ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್‌ ಧರಿಸುವುದನ್ನು ಕಡ್ಡಾಯಗೊಳಿಸಿವೆ’ ಎಂದು ಕ್ವೀನ್ಸ್‌ಲ್ಯಾಂಡ್‌ನ ರಾಜ್ಯ ಸರ್ಕಾರ ತಿಳಿಸಿದೆ.

‘ರೂಪಾಂತರಗೊಂಡ ಕೊರೊನಾ ಸೋಂಕು ಶೇ 70ರಷ್ಟು ಹೆಚ್ಚು ಸಾಂಕ್ರಾಮಿಕವಾಗಿದೆ. ಇದನ್ನು ನಿಯಂತ್ರಿಸಲು ಬ್ರಿಟನ್‌ ಬಹಳ ಕಷ್ಟಪಡುತ್ತಿದೆ. ಹಾಗಾಗಿ ನಾವು ಈ ಸೋಂಕಿನ ವಿರುದ್ಧ ಆದಷ್ಟು ಬೇಗ ಕ್ರಮ ಕೈಗೊಳ್ಳಬೇಕು’ ಎಂದು ಕ್ವೀನ್ಸ್‌ಲ್ಯಾಂಡ್ ಮುಖ್ಯ ಆರೋಗ್ಯ ಅಧಿಕಾರಿ ಜೆನೆಟ್‌ ಯಂಗ್‌ ಅವರು ತಿಳಿಸಿದರು.

ಬ್ರಿಸ್ಬೇನ್‌ ಹೋಟೆಲ್‌ವೊಂದರಲ್ಲಿ ಕ್ವಾರಂಟೈನ್‌ಗೆ ಒಳಪಡಿಸಲಾಗಿದ್ದ ಹಲವು ಪ್ರಯಾಣಿಕರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಅದರಲ್ಲಿ ಸ್ವಚ್ಛತಾ ಸಿಬ್ಬಂದಿಯೊಬ್ಬರಲ್ಲಿ ರೂಪಾಂತರಗೊಂಡ ಕೊರೊನಾ ಪತ್ತೆಯಾಗಿದೆ.

‘ಜನವರಿ 2ರ ವೇಳೆಗೆ ಮಹಿಳೆಗೆ ಸೋಂಕು ತಗುಲಿರಬಹುದು. ಅವರಲ್ಲಿ ಕೆಲವೊಂದು ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಿತ್ತು. ಹಾಗಾಗಿ ಅವರನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿತ್ತು. ಈ ವೇಳೆ ಅವರಲ್ಲಿ ರೂಪಾಂತರಗೊಂಡ ಕೊರೊನಾ ಸೋಂಕು ಪತ್ತೆಯಾಗಿದೆ’ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು