ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಸ್ಟ್ರೇಲಿಯಾ: ಕೋವಿಡ್‌ ಹೆಚ್ಚಳ, ಆಸ್ಪತ್ರೆಗಳ ದಾಖಲಾತಿಯಲ್ಲಿ ಏರಿಕೆ

Last Updated 4 ಜನವರಿ 2022, 11:26 IST
ಅಕ್ಷರ ಗಾತ್ರ

ಸಿಡ್ನಿ, ಆಸ್ಟ್ರೇಲಿಯಾ: ಆಸ್ಟ್ರೇಲಿಯಾದಲ್ಲಿ ಕೋವಿಡ್‌ ಪ್ರಕರಣಗಳು ಮಂಗಳವಾರ ದಾಖಲೆಯ ಮಟ್ಟದಲ್ಲಿ ಏರಿಕೆಯಾಗಿವೆ. ಇದರಿಂದ ದೇಶದ ಆಸ್ಪತ್ರೆಗಳಲ್ಲಿ ದಾಖಲಾತಿ ಪ್ರಮಾಣ ದಿಢೀರ್‌ ಹೆಚ್ಚಳವಾಗಿದೆ. ಕೋವಿಡ್‌ ಪರೀಕ್ಷಾ ಕೇಂದ್ರಗಳ ಸಂಖ್ಯೆಯನ್ನೂ ಹೆಚ್ಚಿಸಲಾಗಿದೆ.

ದೇಶದ ಹೆಚ್ಚು ಜನಸಂಖ್ಯೆ ಇರುವ ರಾಜ್ಯವಾದ ನ್ಯೂ ಸೌತ್‌ ವೇಲ್ಸ್‌ನಲ್ಲಿ ಒಂದೇ ದಿನ 23,131 ಹೊಸ ಕೋವಿಡ್‌ ಪ್ರಕರಣಗಳು ವರದಿಯಾಗಿವೆ. ಹೊಸ ವರ್ಷದ ದಿನ ಈ ಸಂಖ್ಯೆ 22,577 ಇತ್ತು. ಇನ್ನೊಂದೆಡೆ ಕೋವಿಡ್ ಸೋಂಕಿತ 1,344 ಮಂದಿ ಆಸ್ಪತ್ರೆ ಸೇರಿದ್ದಾರೆ. ಕೋವಿಡ್‌ ದೃಢ ಪ್ರಮಾಣ ಶೇ 28 ರಷ್ಟಿದೆ.

ವಿಕ್ಟೋರಿಯಾ ರಾಜ್ಯದಲ್ಲಿ ಮಂಗಳವಾರ 14,020 ಪ್ರಕರಣಗಳು ವರದಿಯಾಗಿವೆ. 516 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 108 ಮಂದಿ ತೀವ್ರ ನಿಗಾ ಘಟಕದಲ್ಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT