ಶುಕ್ರವಾರ, ಸೆಪ್ಟೆಂಬರ್ 25, 2020
26 °C

ಢಾಕಾ: ದೋಣಿ ಮುಳುಗಿ 17 ಮಂದಿ ಸಾವು

ಪಿಟಿಐ Updated:

ಅಕ್ಷರ ಗಾತ್ರ : | |

prajavani

ಢಾಕಾ: ಮದರಸಾ ವಿದ್ಯಾರ್ಥಿಗಳು ಮತ್ತು ಶಿಕ್ಷಕರನ್ನೊಳಗೊಂಡಂತೆ 50 ಮಂದಿ ಪ್ರಯಾಣಿಸುತ್ತಿದ್ದ ದೋಣಿಯೊಂದು ಮುಳುಗಿ 17 ಮಂದಿ ಸಾವನ್ನಪ್ಪಿದ ಘಟನೆ ಉತ್ತರ ಬಾಂಗ್ಲಾ ಭಾಗದಲ್ಲಿ ನಡೆದಿದೆ.

ಮೆಟ್ರೊಕೊನಾ ಜಿಲ್ಲೆಯ ಮದನ್‌ ಉಪಜಿಲಾ ಎಂಬಲ್ಲಿ ಈ ಘಟನೆ ನಡೆದಿರುವುದಾಗಿ ಸ್ಥಳೀಯ ಮಾಧ್ಯವೊಂದು ವರದಿ ಮಾಡಿದೆ.

ಘಟನೆಯಲ್ಲಿ 30 ಮಂದಿಯನ್ನು ರಕ್ಷಿಸಲಾಗಿದೆ. 17 ಶವಗಳನ್ನು ಹೊರತೆಗೆಯಲಾಗಿದೆ. ಉಳಿದವರಿಗಾಗಿ ಹುಡುಕಾಟ ನಡೆದಿರುವುದಾಗಿ ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ. ಈ ಅಪಘಾತಕ್ಕೆ ಕಾರಣ ತಿಳಿದುಬಂದಿಲ್ಲ.

‌ಕಳೆದ ಜೂನ್‌ನಲ್ಲಿ ಢಾಕಾ ನಗರದ ಸಮೀಪದಲ್ಲಿ ಇಂಥದ್ದೇ ಘಟನೆ ಸಂಭವಿಸಿ, 32 ಮಂದಿ ಮೃತಪಟ್ಟಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು