ಶುಕ್ರವಾರ, ಡಿಸೆಂಬರ್ 4, 2020
24 °C
ಒಬಾಮ ಆತ್ಮಚರಿತ್ರೆಯಲ್ಲಿ ಉಲ್ಲೇಖ

ಅಧ್ಯಾಪಕರ ಮೆಚ್ಚಿಸಲು ತುದಿಗಾಲಲ್ಲಿ ನಿಂತಿರುವ ವಿದ್ಯಾರ್ಥಿಯಂತೆ ರಾಹುಲ್‌: ಒಬಾಮ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನ್ಯೂಯಾರ್ಕ್‌: ಅಮೆರಿಕದ ಮಾಜಿ ಅಧ್ಯಕ್ಷ ಬರಾಕ ಒಬಾಮ ತಮ್ಮ ಆತ್ಮಚರಿತ್ರೆ ‘ಎ ಪ್ರಾಮಿಸ್ಡ್‌ ಲ್ಯಾಂಡ್‌‘ ಕೃತಿಯಲ್ಲಿ ಭಾರತದ ಇಬ್ಬರು ಪ್ರಮುಖ ರಾಜಕಾರಣಿಗಳಾದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ನೆನಪಿಸಿಕೊಂಡಿದ್ದಾರೆ.

ನ್ಯೂಯಾರ್ಕ್ ಟೈಮ್ಸ್‌ ಪತ್ರಿಕೆಯಲ್ಲಿ ಈ ಆತ್ಮಚರಿತ್ರೆಯ ಕುರಿತು ವಿಮರ್ಶೆ ಪ್ರಕಟವಾಗಿದ್ದು, ಅದರಲ್ಲಿ ಈ ವಿವರಗಳನ್ನು ಉಲ್ಲೇಖಿಸಲಾಗಿದೆ.

ಅಧ್ಯಾಪಕರನ್ನು ಮೆಚ್ಚಿಸಲು ತುದಿಗಾಲಲ್ಲಿ ನಿಂತಿರುವ ಕೋರ್ಸ್ ವರ್ಕ್ ಮುಗಿಸಿದ ವಿದ್ಯಾರ್ಥಿಯೇನೋ ಎಂಬಂತೆ ಅಳುಕು, ಅಪಕ್ವತೆಯನ್ನು ಹೊಂದಿದವರು ರಾಹುಲ್ ಗಾಂಧಿ. ಆದರೆ ಆಳದಲ್ಲಿ ವಿಷಯವನ್ನು ಕರಗತ ಮಾಡಿಕೊಳ್ಳಲು ಬೇಕಾದ ವ್ಯಾಮೋಹವಾಗಲೀ ಸಹಜ ಆಸಕ್ತಿಯಾಗಲೀ ಅವರಲ್ಲಿಲ್ಲ ಎಂದು ರಾಹುಲ್ ಅವರ ಬಗ್ಗೆ ಒಬಾಮ ಹೇಳಿರುವುದನ್ನು ವಿಮರ್ಶೆಯಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: 

ತಮ್ಮ ರಾಜಕೀಯ ಜೀವನದ ಘಟನಾವಳಿಗಳನ್ನು ನೆನಪಿಸಿಕೊಳ್ಳುತ್ತಾ, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ರಷ್ಯಾ ಅಧ್ಯಕ್ಷ ಪುಟಿನ್, ಅಮೆರಿಕದ ಮಾಜಿ ರಕ್ಷಣಾ ಕಾರ್ಯದರ್ಶಿ ಬಾಬ್ ಗೇಟ್ಸ್, ಭಾರತದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಕಾರ್ಯವೈಖರಿಯ ಬಗ್ಗೆಯೂ ಬರೆದಿದ್ದಾರೆ.

ಬಾಬ್‌ ಗೇಟ್ಸ್‌ ಮತ್ತು ಮನಮೋಹನ್ ಸಿಂಗ್ ಅವರನ್ನು ‘ನಿರ್ದಾಕ್ಷಿಣ್ಯ, ಸಮಗ್ರ ದೃಷ್ಟಿಕೋನವುಳ್ಳ ಪ್ರಭಾವಶಾಲಿ ವ್ಯಕ್ತಿಗಳು’ ಎಂದೂ ಬಣ್ಣಿಸಿದ್ದಾರೆ. 

ಒಬಾಮ ಅವರ ‘ಎ ಪ್ರಾಮಿಸ್ಡ್‌ ಲ್ಯಾಂಡ್’ ಪುಸ್ತಕ ಈ ಮಾಸಾಂತ್ಯಕ್ಕೆ ಸಾರ್ವಜನಿಕರಿಗೆ ಲಭ್ಯವಾಗಲಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು