ಮಂಗಳವಾರ, ನವೆಂಬರ್ 30, 2021
21 °C

ಚೀನಾ: ಹೊಸ ಕೋವಿಡ್‌ ಪ್ರಕರಣಗಳು ಪತ್ತೆ, ಸಾಮೂಹಿಕ ಪರೀಕ್ಷೆಗೆ ಚಿಂತನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀಜಿಂಗ್‌: ಚೀನಾದಲ್ಲಿ ಮತ್ತೆ ಕೋವಿಡ್‌ ಪಿಡುಗಿನ ಆರ್ಭಟ ಹೆಚ್ಚಾಗುತ್ತಿದ್ದು ಶುಕ್ರವಾರ ಬೀಜಿಂಗ್‌ ಜಿಲ್ಲಾ ವ್ಯಾಪ್ತಿಯಲ್ಲಿ ನಾಲ್ಕು ಹೊಸ ಪ್ರಕರಣಗಳು ಪತ್ತೆಯಾಗಿವೆ. ಮುನ್ನೆಚ್ಚರಿಕೆಯಾಗಿ ಸಾವಿರಾರು ಜನರಿಗೆ ಕೋವಿಡ್‌ ಪರೀಕ್ಷೆ ನಡೆಸಲು ಬೀಜಿಂಗ್‌ ಯೋಜಿಸಿದೆ. 

ಹೊಸ ಪ್ರಕರಣಗಳ ಪತ್ತೆ ಹಿನ್ನೆಲೆ ದೇಶದಾದ್ಯಂತ ಶಾಲೆಗಳನ್ನು ಮುಚ್ಚಲಾಗಿದ್ದು ವಿಮಾನಯಾನ ರದ್ದುಗೊಳಿಸಲಾಗಿದೆ. ಸಾರ್ವಜನಿಕರ ವೀಕ್ಷಣೆಗೆ ಪ್ರೇಕ್ಷಣೀಯ ಸ್ಥಳಗಳನ್ನು ಬಂದ್ ಮಾಡಲಾಗಿದೆ.

ಬೀಜಿಂಗ್‌ನಲ್ಲಿ ಕೋವಿಡ್‌ ಸುರಕ್ಷತಾ ಕ್ರಮಗಳನ್ನು ಬಿಗಿಗೊಳಿಸಲಾಗಿದೆ. ಇದುವರೆಗೆ 35 ಸಾವಿರ ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಸರ್ಕಾರಿ ಮಾಧ್ಯಮ ಶುಕ್ರವಾರ ವರದಿ ಮಾಡಿದೆ. 

ಸ್ಥಳೀಯವಾಗಿ ಹರಡುವ 28 ಹೊಸ ಕೋವಿಡ್‌ ಪ್ರಕರಣಗಳನ್ನು ಚೀನಾ ಗುರುವಾರ ದಾಖಲಿಸಿದೆ. ಹಿಂದಿನ ದಿನಕ್ಕಿಂತ 15 ಪ್ರಕರಣಗಳು ಹೆಚ್ಚಾಗಿವೆ ಎಂದು ರಾಷ್ಟ್ರೀಯ ಆರೋಗ್ಯ ಆಯೋಗ ಶುಕ್ರವಾರ ಹೇಳಿಕೆಯಲ್ಲಿ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು