ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಷ್ಯಾ ಅಧಿಕಾರಿಗಳಿಂದ ಬೇಹುಗಾರಿಕೆ; 21 ಜನರನ್ನು ಹೊರಹಾಕಿದ ಬೆಲ್ಜಿಯಂ

Last Updated 29 ಮಾರ್ಚ್ 2022, 15:27 IST
ಅಕ್ಷರ ಗಾತ್ರ

ಬ್ರಸೆಲ್ಸ್‌: ಬೇಹುಗಾರಿಕೆ ನಡೆಸಿರುವ ಆರೋಪದ ಮೇಲೆ ರಷ್ಯಾದ 21 ಮಂದಿ ರಾಜತಾಂತ್ರಿಕ ಅಧಿಕಾರಿಗಳನ್ನು ದೇಶದಿಂದ ಹೊರಹಾಕಿರುವುದಾಗಿಬೆಲ್ಜಿಯಂನ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮಂಗಳವಾರ ತಿಳಿಸಿದೆ.

ಬ್ರಸೆಲ್ಸ್‌ನಲ್ಲಿರುವ ರಾಯಭಾರ ಕಚೇರಿ ಮತ್ತು ಆಂಟ್ವೆರ್ಪ್‌ನಲ್ಲಿರುವ ಕಾನ್ಸುಲೇಟ್‌ ಕಚೇರಿಯಲ್ಲಿ ರಷ್ಯಾದ 21 ಮಂದಿ ಅಧಿಕಾರಿಗಳು ಕಾರ್ಯನಿರ್ವಹಿಸುತ್ತಿದ್ದರು. ಅವರೆಲ್ಲರಿಗೂ ರಾಜತಾಂತ್ರಿಕ ಅಧಿಕಾರಿಗಳ ಮಾನ್ಯತೆ ನೀಡಲಾಗಿತ್ತು. ಆದರೆ, ಅವರು ಬೇಹುಗಾರಿಕೆ ನಡೆಸುವುದು ಹಾಗೂ ಕಾರ್ಯಾಚರಣೆಗಳ ಮೇಲೆ ಪ್ರಭಾವ ಬೀರುವುದರಲ್ಲಿ ನಿರತರಾಗಿದ್ದರು ಎಂದು ವಿದೇಶಾಂಗ ಸಚಿವಾಲಯದ ವಕ್ತಾರರು ಹೇಳಿದ್ದಾರೆ.

ನೆದರ್ಲೆಂಡ್ಸ್‌ ವಿದೇಶಾಂಗ ಸಚಿವಾಲಯ ಸಹ ರಷ್ಯಾದ 17 ಮಂದಿ ರಾಜತಾಂತ್ರಿಕ ಅಧಿಕಾರಿಗಳನ್ನು ದೇಶದಿಂದ ಹೊರಹಾಕಿದೆ. ಮಾನ್ಯತೆ ಪಡೆದಿರುವ ಅಧಿಕಾರಿಗಳು ಗೂಢಚಾರಿಕೆ ನಡೆಸುತ್ತಿರುವ ಬಗ್ಗೆ ಭದ್ರತಾ ಪಡೆಗಳಿಂದ ಮಾಹಿತಿ ಲಭ್ಯವಾದ ಬೆನ್ನಲ್ಲೇ ಡಚ್‌ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.

ಇನ್ನಷ್ಟು ಓದು....

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT