ಬುಧವಾರ, ಆಗಸ್ಟ್ 10, 2022
23 °C

ಇಸ್ರೇಲ್‌: ನೇತನ್ಯಾಹು ಪದಚ್ಯುತಿ– ನಫ್ತಾಲಿ ನೂತನ ಪ್ರಧಾನಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಜೆರುಸಲೇಮ್‌: ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೇತನ್ಯಾಹು ಅವರನ್ನು ಭಾನುವಾರ ಪದಚ್ಯುತಗೊಳಿಸಲಾಗಿದ್ದು, ನಫ್ತಾಲಿ ಬೆನೆಟ್‌ ಅವರು ನೂತನ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದರು.

ನೇತನ್ಯಾಹು ಬೆಂಬಲಿಗರ ಗದ್ದಲದ ನಡುವಯೇ, ಅವರ ಪದಚ್ಯುತಿಗೆ 120 ಸದಸ್ಯ ಬಲದ ಇಸ್ರೇಲ್‌ ಸಂಸತ್‌ ಅನುಮೋದನೆ ನೀಡಿತು.  ಇದರೊಂದಿಗೆ ಕಳೆದ 12 ವರ್ಷಗಳಿಂದಲೂ ಪ್ರಧಾನಿಯಾಗಿದ್ದ ನೇತನ್ಯಾಹು ಅವರ ಅಧಿಕಾರ ಕೊನೆಗೊಂಡಂತಾಗಿದೆ.

ಮಾಜಿ ರಕ್ಷಣಾ ಸಚಿವರೂ ಆಗಿರುವ 49 ವರ್ಷದ ನಫ್ತಾಲಿ ಅವರು ಬಲಪಂಥೀಯ ಪಕ್ಷ ಯಾಮಿನಿ ಪಾರ್ಟಿಯ ಮುಖಂಡ. ಅವರು ಸೈದ್ಧಾಂತಿಕವಾಗಿ ವಿಭಿನ್ನ ನಿಲುವುಗಳನ್ನು ಹೊಂದಿರುವ ಎಡಪಂಥೀಯ, ಬಲಪಂಥೀಯ, ಅರಬ್‌ ಪಕ್ಷಗಳ ಮೈತ್ರಿಕೂಟದ ನಾಯಕರಾಗಿದ್ದಾರೆ.

ನೂತನ ಸರ್ಕಾರದಲ್ಲಿ 9 ಜನ ಮಹಿಳೆಯರು ಸೇರಿ 27 ಜನ ಸಚಿವರಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು