ವಾಷಿಂಗ್ಟನ್: ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹೇರಿದ್ದ ಎಚ್–1ಬಿ ವೀಸಾ ಮೇಲಿನ ನಿರ್ಬಂಧಗಳನ್ನು ತೆರವುಗೊಳಿಸುವ ಬಗ್ಗೆ ಯಾವುದೇ ನಿರ್ಧಾರವನ್ನು ಕೈಗೊಂಡಿಲ್ಲ ಎಂದು ಜೋ ಬೈಡನ್ ಆಡಳಿತ ಸೋಮವಾರ ತಿಳಿಸಿದೆ.
ಶ್ವೇತಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೋಂಲ್ಯಾಂಡ್ ಸೆಕ್ಯುರಿಟಿ ಕಾರ್ಯದರ್ಶಿ ಅಲೆಜಾಂಡ್ರೊ ಮಯೋಕಾರ್ಸ್, ಸದ್ಯಕ್ಕೆ ಜನಾಂಗಗಳ ಮೇಲಾಗುತ್ತಿರುವ ದೌರ್ಜನ್ಯವನ್ನು ತಡೆಯುವುದು ನಮ್ಮ ಪ್ರಮುಖ ಉದ್ಧೇಶವಾಗಿದೆ ಎಂದರು.
ಅಮೆರಿಕದಲ್ಲಿ ನಿರುದ್ಯೋಗ ಹೆಚ್ಚಿದೆ. ಇಂತಹ ಸಂದರ್ಭದಲ್ಲಿ ಹೆಚ್ಚಿನ ವಿದೇಶಿ ಕೆಲಸಗಾರರಿಗೆ ಅವಕಾಶ ನೀಡಲು ಸಾಧ್ಯವಿಲ್ಲ ಎಂಬ ಕಾರಣ ನೀಡಿ,ಟ್ರಂಪ್ ಸರ್ಕಾರವು ಎಚ್–1ಬಿ ವೀಸಾದ ಮೇಲೆ ಹೊಸ ನಿರ್ಬಂಧಗಳನ್ನು ಹೇರಿತ್ತು. ಇದು ಈ ತಿಂಗಳ 31ರ ತನಕ ಜಾರಿಯಲಿರಲಿದೆ.
ಮುಸ್ಲಿಮರ ವೀಸಾದ ಮೇಲೆ ನಿರ್ಬಂಧ, ಗ್ರೀನ್ ಕಾರ್ಡ್ ಸಂಬಂಧಿತ ಆದೇಶಗಳು ಸೇರಿದಂತೆ ಟ್ರಂಪ್ ಸರ್ಕಾರ ಹೊರಡಿಸಿದ್ದ ಹಲವು ಕಾರ್ಯಾದೇಶಗಳನ್ನುನೂತನ ಅಧ್ಯಕ್ಷ ಜೋ ಬೈಡನ್ ಅವರು ರದ್ದುಗೊಳಿಸಿದ್ದರು. ಆದರೆ ಎಚ್–1ಬಿ ವೀಸಾದ ಮೇಲಿನ ನಿರ್ಬಂಧಗಳನ್ನು ರದ್ದುಗೊಳಿಸಿರಲಿಲ್ಲ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.