ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟ್ರಂಪ್‌ ವೈಯಕ್ತಿಕ ಉದ್ದೇಶಗಳಿಗೆ ಸೇನಾಪಡೆ ಬಳಕೆ: ಬೈಡನ್

Last Updated 30 ಆಗಸ್ಟ್ 2020, 8:15 IST
ಅಕ್ಷರ ಗಾತ್ರ

ವಾಷಿಂಗ್ಟನ್‌: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಅವರು ವೈಯಕ್ತಿಕ ದ್ವೇಷ ತೀರಿಸಿಕೊಳ್ಳಲು ಸೇನಾಪಡೆಗಳನ್ನು ಬಳಸಿಕೊಳ್ಳುವ ಮೂಲಕ, ನಾಗರಿಕರ ಹಕ್ಕುಗಳ ಉಲ್ಲಂಘನೆಗೂ ಕಾರಣರಾಗುತ್ತಿದ್ದಾರೆ ಎಂದು ಡೆಮಾಕ್ರಟಿಕ್ ಪಕ್ಷದ ಅಧ್ಯಕ್ಷೀಯ ಸ್ಥಾನದ ಅಭ್ಯರ್ಥಿ ಜೊ ಬೈಡನ್ ಆರೋಪಿಸಿದರು.

ಅಮೆರಿಕದ ನ್ಯಾಷನಲ್‌ ಗಾರ್ಡ್‌ ಅಸೋಸಿಯೇಷನ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಅಧ್ಯಕ್ಷನಾಗಿ ಆಯ್ಕೆಯಾದರೆ ಯಾವುದೇ ಕಾರಣಕ್ಕೂ ವೈಯಕ್ತಿಕ ವಿಚಾರಗಳಿಗೆ ಸೇನಾಪಡೆಗಳ ನೆರವು ಪಡೆಯುವುದಿಲ್ಲ‘ ಎಂದು ಭರವಸೆ ನೀಡಿದರು.

‘ನಮ್ಮ ನಾಗರಿಕರು ನಡೆಸುವ ಶಾಂತಿಯುತ ಪ್ರತಿಭಟನೆಯನ್ನು ಹತ್ತಿಕ್ಕಲು ಟ್ರಂಪ್ ನಿಮ್ಮನ್ನು (ಸೇನಾಪಡೆ) ಬಳಸಿಕೊಳ್ಳುತ್ತಿದ್ದಾರೆ‘ ಎಂದು ಆರೋಪಿಸಿದ ಅವರು, ‘ಸೇನಾಪಡೆಯನ್ನು ಬಳಸಿಕೊಳ್ಳುವ ಈ ಪ್ರಕ್ರಿಯೆ ಸರಿಯಲ್ಲ‘ ಎಂದು ಹೇಳಿದ್ದಾರೆ.

‘ಚುನಾವಣೆ ಪ್ರಕ್ರಿಯೆಯಲ್ಲಿ ಅಥವಾ ಮತದಾನದ ಸಂದರ್ಭದಲ್ಲಿ ಉದ್ಭವಿಸುವ ಸಮಸ್ಯೆಗಳನ್ನು ಪರಿಹರಿಸಲು ಸೇನಾ ಪಡೆಗಳನ್ನು ಬಳಸುವುದಿಲ್ಲ ಎಂದು ಸೇನಾಪಡೆಯ ಮುಖ್ಯಸ್ಥ ಜನರಲ್‌ ಮಾರ್ಕ್‌ ಮಿಲ್ಲೆ ಸರ್ಕಾರಕ್ಕೆ ತಿಳಿಸಿದ ಹಿನ್ನೆಲೆಯಲ್ಲಿ ಬೈಡೆನ್ ಈ ರೀತಿ ಟ್ರಂಪ್ ವಿರುದ್ಧ ಹರಿಯಾಯ್ದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT