ವಾಷಿಂಗ್ಟನ್: ‘ನಿರ್ಗಮಿತ ಅಧ್ಯಕ್ಷರು ತಮ್ಮ ಕಚೇರಿಯಲ್ಲಿ ಕೆಲಸ ಮಾಡುವುದನ್ನು ಬಿಟ್ಟು, ಸುಮ್ಮನೆ ಗೊಣಗಾಡುತ್ತಾ, ಬೇರೆಯವರನ್ನು ದೂರುವುದರಲ್ಲೇ ಸಮಯ ಕಳೆಯುತ್ತಿದ್ದಾರೆ’ ಎಂದು ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಆಯ್ಕೆಯಾಗಿರುವ ಜೋ ಬೈಡನ್ ಅವರು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿರುದ್ಧ ಹರಿಹಾಯ್ದಿದ್ದಾರೆ.

‘ಈ ಅಧ್ಯಕ್ಷರು ಸಮಸ್ಯೆಗೆ ಪರಿಹಾರ ಹುಡುಕುವ ಬದಲು, ಹೆಚ್ಚು ಸಮಯವನ್ನು ದೂರುವುದರಲ್ಲಿ, ಬೇರೆಯವರ ಬಗ್ಗೆ ಗುಟ್ಟಾಗಿ ಮಾತಾಡುವುದರಲ್ಲೇ ವ್ಯರ್ಥ ಮಾಡುತ್ತಿದ್ದಾರೆ’ ಎಂದು ಬೈಡನ್ ಟೀಕಿಸಿದ್ದಾರೆ.

ಜಾರ್ಜಿಯಾ ಕ್ಷೇತ್ರದಲ್ಲಿ ಸೋಮವಾರ ನಡೆದ ಡ್ರೈವ್ ಇನ್ ಚುನಾವಣಾ ರ‍್ಯಾಲಿಯಲ್ಲಿ ಬೈಡನ್ ಅವರು ಇಬ್ಬರು ಡೆಮಾಕ್ರಟಿಕ್ ಅಭ್ಯರ್ಥಿಗಳಿಗೆ ಬೆಂಬಲ ಕೋರುವ ಸಮಯದಲ್ಲಿ ಈ ಹೇಳಿಕೆಗಳನ್ನು ನೀಡಿದ್ದಾರೆ. ಜಾರ್ಜಿಯಾದಲ್ಲಿ ನಡೆಯುತ್ತಿರುವ ಈ ಚುನಾವಣೆ ಫಲಿತಾಂಶ, ಅಮೆರಿಕದ ಸೆನೆಟ್‌ನಲ್ಲಿ ಯಾವ ಪಕ್ಷಕ್ಕೆ ಬಹುಮತ ಸಿಗಬಹುದೆಂದು ತೀರ್ಮಾನಿಸಲಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.