ಅಮೆರಿಕ ಅಟಾರ್ನಿ ಜನರಲ್ ಹುದ್ದೆಗೆ ಗಾರ್ಲಂಡ್

ವಾಷಿಂಗ್ಟನ್: ಮೆರಿಕ್ ಗಾರ್ಲಂಡ್ ಅವರನ್ನು ಅಟಾರ್ನಿ ಜನರಲ್ ಹುದ್ದೆಗೆ ನೇಮಕ ಮಾಡುವುದಾಗಿ ಅಮೆರಿಕದ ನಿಯೋಜಿತ ಅಧ್ಯಕ್ಷ ಜೋ ಬೈಡನ್ ಗುರುವಾರ ಹೇಳಿದ್ದಾರೆ.
ವಾಷಿಂಗ್ಟನ್ ಫೆಡರಲ್ ಅಪೀಲ್ಸ್ ನ್ಯಾಯಾಲಯದ ನ್ಯಾಯಾಧೀಶರಾಗಿರುವ 68 ವರ್ಷ ವಯಸ್ಸಿನ ಗಾರ್ಲಂಡ್, 1993ರಲ್ಲಿ ಸಹಾಯಕ ಅಟಾರ್ನಿ ಜನರಲ್ ಆಗಿ ಸೇವೆ ಸಲ್ಲಿಸಿದ್ದರು. ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ಪ್ರಮುಖ ಪ್ರಕರಣಗಳನ್ನು ಸಮರ್ಥವಾಗಿ ನಿರ್ವಹಿಸಿದ್ದರು.
1997ರಲ್ಲಿ ಅಧ್ಯಕ್ಷರಾಗಿದ್ದ ಬಿಲ್ ಕ್ಲಿಂಟನ್ ಅವರು ಗಾರ್ಲಂಡ್ ಅವರನ್ನು ಆಗ ವಾಷಿಂಗ್ಟನ್ ಅಪೀಲ್ಸ್ ನ್ಯಾಯಾಲಯದ ನ್ಯಾಯಾಧೀಶರನ್ನಾಗಿ ನೇಮಿಸಿದ್ದರು. ಬಳಿಕ ಅದೇ ನ್ಯಾಯಾಲಯದಲ್ಲಿ ಮುಖ್ಯ ನ್ಯಾಯಮೂರ್ತಿಯಾಗಿಯೂ (2013ರಲ್ಲಿ) ಸೇವೆ ಸಲ್ಲಿಸಿದ್ದರು.
ಪ್ರಜಾವಾಣಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.