ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌ ವಿರುದ್ಧ ಹೋರಾಡಲು ಭಾರತಕ್ಕೆ ನೆರವು: ಬೈಡನ್‌, ಕಮಲಾ ಹ್ಯಾರಿಸ್‌ ಭರವಸೆ

Last Updated 26 ಏಪ್ರಿಲ್ 2021, 6:52 IST
ಅಕ್ಷರ ಗಾತ್ರ

ವಾಷಿಂಗ್ಟನ್‌: ಭಾರತಕ್ಕೆ ಕೋವಿಡ್‌ ವಿರುದ್ಧ ಹೋರಾಡಲು ಎಲ್ಲಾ ರೀತಿಯ ನೆರವನ್ನು ಒದಗಿಸುವುದಾಗಿ ಅಮೆರಿಕದ ಅಧ್ಯಕ್ಷ ಜೋ ಬೈಡನ್‌ ಮತ್ತು ಉಪಾಧ್ಯಕ್ಷೆ ಕಮಲಾ ಹ್ಯಾರಿಸ್‌ ಅವರು ಭರವಸೆ ನೀಡಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಜೋ ಬೈಡನ್‌ ಅವರು,‘ಅಮೆರಿಕ ಸಾಂಕ್ರಾಮಿಕದಿಂದಾಗಿ ತತ್ತರಿಸಿ ಹೋಗಿದ್ದಾಗ ಭಾರತವು ನಮಗೆ ನೆರವು ನೀಡಿತ್ತು. ಅದೇ ರೀತಿ ಈಗ ಭಾರತ ತೊಂದರೆಯಲ್ಲಿರುವಾಗ ಅಮೆರಿಕವೂ ಅದರ ನೆರವಿಗೆ ಬರಲಿದೆ’ ಎಂದಿದ್ದಾರೆ.

‘ಕೋವಿಡ್‌ ವಿರುದ್ಧ ಹೋರಾಡಲು ಬೇಕಾಗಿರುವ ಹೆಚ್ಚುವರಿ ಬೆಂಬಲವನ್ನು ಒದಗಿಸಲು ಅಮೆರಿಕವು ಭಾರತ ಸರ್ಕಾರದೊಂದಿಗೆ ನಿಕಟವಾಗಿ ಕೆಲಸ ಮಾಡುತ್ತಿದೆ. ನಾವು ಭಾರತದ ಆರೋಗ್ಯ ಕಾರ್ಯಕರ್ತರು ಮತ್ತು ದೇಶದ ಜನರು ಸುರಕ್ಷತೆಗಾಗಿ ಪ್ರಾರ್ಥನೆ ಮಾಡುತ್ತಿದ್ಧೇವೆ’ ಎಂದು ಕಮಲಾ ಹ್ಯಾರಿಸ್‌ ಟ್ವೀಟ್‌ ಮಾಡಿದ್ದಾರೆ.

‘ಭಾರತದ ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ ಶ್ರಿಂಗ್ಲಾ ಮತ್ತು ಅಮೆರಿಕದಲ್ಲಿನ ಭಾರತದ ರಾಯಭಾರಿ ತರಣಜಿತ್‌ ಸಿಂಗ್ ಅವರೊಂದಿಗೆ ಸಂಪರ್ಕದಲ್ಲಿದ್ದೇನೆ’ ಎಂದು ವಿದೇಶಾಂಗ ಸಚಿವಾಲಯದ ಉಪಕಾರ್ಯದರ್ಶಿ ವೆಂಡಿ ಶರ್ಮನ್‌ ಅವರು ತಿಳಿಸಿದರು.

‘ಅಮೆರಿಕದ ನಾಗರಿಕರೂ ಭಾರತದ ಜೊತೆಗಿದ್ದಾರೆ. ಅಮೆರಿಕವು ಈ ಕಷ್ಟ ಕಾಲದಲ್ಲಿ ವೆಂಟಿಲೇಟರ್‌, ಪಿಪಿಇ, ಲಸಿಕೆಯ ಕಚ್ಚಾ ವಸ್ತುಗಳು ಸೇರಿದಂತೆ ಇತರೆ ಅಗತ್ಯ ವಸ್ತುಗಳನ್ನು ಭಾರತಕ್ಕೆ ನೀಡುತ್ತಿದೆ’ ಎಂದು ಅವರು ಹೇಳಿದರು.

ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಆ್ಯಂಥೋನಿ ಬ್ಲಿಂಕೆನ್‌ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಜೇಕ್ ಸುಲ್ಲಿವಾನ್ ಅವರಿಗೆ ತರಣಜಿತ್‌ ಸಿಂಗ್ ಅವರು ಟ್ವಿಟರ್‌ ಮೂಲಕ ಕೃತಜ್ಞತೆ ಸಲ್ಲಿಸಿದ್ದಾರೆ.

ಅಲ್ಲದೆ ಭಾರತೀಯ ಮೂಲದ ಅಮೆರಿಕದ ಸಂಸದ ರೋ ಖನ್ನಾ ಅವರು ಕೂಡ ಮೆಚ್ಚುಗೆ ವ್ಯಕ್ತಪಡಿಸಿದ್ಧಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT