ಬುಧವಾರ, ಸೆಪ್ಟೆಂಬರ್ 23, 2020
27 °C
ಅಮೆರಿಕ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ

ನಾಮಪತ್ರಕ್ಕೆ ಸಂಬಂಧಿಸಿದ ದಾಖಲೆಗಳಿಗೆ ಬಿಡೆನ್‌–ಕಮಲಾ ಸಹಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ವಾಷಿಂಗ್ಟನ್: ಜೋ ಬಿಡೆನ್ ಮತ್ತು ಭಾರತ ಮೂಲದ ಸೆನೆಟರ್‌ ಕಮಲಾ ಹ್ಯಾರಿಸ್ ಅವರು ಕ್ರಮವಾಗಿ ಅಮೆರಿಕದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನದ ಚುನಾವಣೆಗೆ ಡೆಮಾಕ್ರಾಟಿಕ್‌ ಪಕ್ಷದ ಅಭ್ಯರ್ಥಿಯಾಗುವ ನಾಮಪತ್ರಕ್ಕೆ ಅಗತ್ಯವಿರುವ ದಾಖಲೆಗಳಿಗೆ ಶುಕ್ರವಾರ ಸಹಿ ಹಾಕಿದ್ದಾರೆ.

ಪಕ್ಷದಿಂದ ಅಧ್ಯಕ್ಷ ಸ್ಥಾನದ ಅಭ್ಯರ್ಥಿಯಾಗಿರುವ 77 ವರ್ಷದ ಬಿಡೆನ್, 55 ವರ್ಷದ ಕಮಲಾ ಅವರನ್ನು ಉಪಾಧ್ಯಕ್ಷ ಸ್ಥಾನದ ಅಭ್ಯರ್ಥಿಯಾಗಿ ಆಯ್ಕೆ ಮಾಡುವ ಮೂಲಕ ಹೊಸ ಇತಿಹಾಸಕ್ಕೆ ಭಾಷ್ಯ ಬರೆದಿದ್ದರು. ಈ ಸ್ಥಾನಕ್ಕೆ ಅಭ್ಯರ್ಥಿಯಾಗಿ ಆಯ್ಕೆಯಾದ ಮೊದಲ ಕಪ್ಪುವರ್ಣೀಯ ಮಹಿಳೆ ಕಮಲಾ ಆಗಿದ್ದಾರೆ.

ಕಳೆದ ವರ್ಷದವರೆಗೂ ಕಮಲಾ ಅವರೇ ಅಧ್ಯಕ್ಷ ಸ್ಥಾನದ ಅಭ್ಯರ್ಥಿಯಾಗಿ ಸ್ಪರ್ಧೆಯ ಮುಂಚೂಣಿಯಲ್ಲಿದ್ದರು. ಆದರೆ, ಬೆಂಬಲದ ಕೊರತೆಯಿಂದಾಗಿ ಸ್ಪರ್ಧೆಯಿಂದ ಹಿಂದೆ ಸರಿದಿದ್ದರು.

ಉಪಾಧ್ಯಕ್ಷ ಸ್ಥಾನದ ಅಭ್ಯರ್ಥಿ ಜೊತೆಗೆ ಮೊದಲ ದಿನದ ಪ್ರಚಾರ ಹೇಗಿತ್ತು ಎಂಬ ಪ್ರಶ್ನೆಗೆ, ‘ನಿಜಕ್ಕೂ ಚೆನ್ನಾಗಿತ್ತು’ ಎಂದು ಬಿಡೆನ್ ಪ್ರತಿಕ್ರಿಯಿಸಿದರು.

ಬಿಡೆನ್ ಮತ್ತು ಕಮಲಾ ಇಬ್ಬರೂ ಕೋವಿಡ್-19 ಸಂಬಂಧಿತ ಆರೋಗ್ಯ ಕ್ಷೇತ್ರದ ಬಿಕ್ಕಟ್ಟು ಮತ್ತು ಆರ್ಥಿಕ ಹಿಂಜರಿತಕ್ಕೆ ಸಂಬಂಧಿತ ಎರಡು ವರ್ಚುಯೆಲ್ ಸಭೆಗಳಲ್ಲಿಯೂ ಭಾಗವಹಿಸಿದ್ದರು. ಆಯಾ ಕ್ಷೇತ್ರದ ಪರಿಣತರು, ವೈದ್ಯರು ಮಾಹಿತಿ ಒದಗಿಸಿದರು.

ಸಭೆಯಲ್ಲಿ ಭಾರತೀಯ ಮೂಲದ ಅಮೆರಿಕನ್ನರಾದ ಸರ್ಜನ್ ಜನರಲ್ ಡಾ.ವಿವೇಕ್ ಮೂರ್ತಿ ಮತ್ತು ಹಾರ್ವರ್ಡ್‌ ವಿಶ್ವವಿದ್ಯಾಲಯದ ಅರ್ಥಶಾಸ್ತ್ರ ವಿಷಯದ ಪ್ರಾಧ್ಯಾಪಕ  ರಾಜ್ ಚೆಟ್ಟಿ ಅವರೂ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು