ಭಾನುವಾರ, ಫೆಬ್ರವರಿ 28, 2021
21 °C

ಕೋವಿಡ್‌–19: ಯೂರೋಪ್, ಬ್ರೆಜಿಲ್ ಪ್ರಯಾಣಿಕರಿಗೆ ನಿರ್ಬಂಧ ಹೇರಿದ ಅಮೆರಿಕ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ವಾಷಿಂಗ್ಟನ್‌: ಕೋವಿಡ್‌ ರೂಪಾಂತರಿದ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅಮೆರಿಕ ಅಧ್ಯಕ್ಷ ಜೋ ಬೈಡನ್‌ ಅವರು ಯುರೋಪ್‌ ಮತ್ತು ಬ್ರೆಜಿಲ್‌ ಮೇಲೆ ಮತ್ತೆ ಪ್ರಯಾಣ ನಿರ್ಬಂಧವನ್ನು ಹೇರಿದ್ದಾರೆ.

‘ದಕ್ಷಿಣ ಆಫ್ರಿಕಾದಲ್ಲಿ ಕೊರೊನಾ ರೂಪಾಂತರ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಅಲ್ಲಿನ ಪ್ರಯಾಣಿಕರಿಗೂ ನಿರ್ಬಂಧ ಹೇರಲಾಗಿದೆ’ ಎಂದು ಶ್ವೇತ ಭವನ ತಿಳಿಸಿದೆ.

‘ಕೋವಿಡ್‌–19 ಮತ್ತು ವೈದ್ಯಕೀಯ ತಂಡದ ಸಲಹೆ ಆಧರಿಸಿ ಈ ಕ್ರಮ ಕೈಗೊಳ್ಳಲಾಗಿದೆ. ಯುರೋಪ್‌ನ ಷೆಂಗೆನ್ ಪ್ರದೇಶ, ಬ್ರಿಟನ್‌, ಐರ್ಲೆಂಡ್‌ ಮತ್ತು ಬ್ರೆಜಿಲ್‌ ಮೇಲಿನ ಪ್ರಯಾಣ ನಿರ್ಬಂಧ ಮುಂದುವರಿಸಲು ನಿರ್ಧರಿಸಲಾಗಿದೆ’ ಎಂದು ಶ್ವೇತ ಭವನದ ಮಾಧ್ಯಮ ಕಾರ್ಯದರ್ಶಿ ಜೆನ್‌ ಸಾಕಿ ಮಾಹಿತಿ ನೀಡಿದರು.

‘ಸೋಂಕು ತೀವ್ರವಾಗಿ ಹರಡುತ್ತಿದೆ. ಈ  ಸಂದರ್ಭದಲ್ಲಿ ಅಂತರರಾಷ್ಟ್ರೀಯ ಪ್ರಯಾಣದ ಮೇಲಿನ ನಿರ್ಬಂಧವನ್ನು ಹಿಂಪಡೆಯುವುದು ಸರಿಯಲ್ಲ. ಹಾಗಾಗಿ ಪ್ರಯಾಣ ನಿರ್ಬಂಧವನ್ನು ಮತ್ತೆ ಹೇರಲಾಗಿದೆ’ ಎಂದು ಅವರು ಹೇಳಿದರು.

‘ಜನವರಿ 26 ರಿಂದ ಅಮೆರಿಕಕ್ಕೆ ಆಗಮಿಸುವ ಮುನ್ನ ಅಂತರರಾಷ್ಟ್ರೀಯ ಪ್ರಯಾಣಿಕರು ನಿಲ್ದಾಣದಲ್ಲಿ ಕೋವಿಡ್‌ ಪರೀಕ್ಷೆಯ ನೆಗೆಟಿವ್‌ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಸಲ್ಲಿಸಬೇಕು’ ಎಂದು ಅವರು ತಿಳಿಸಿದರು.

ಈ ಬಗ್ಗೆ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು,‘ ಜನರ ಸುರಕ್ಷತೆಯ ದೃಷ್ಟಿಯಿಂದ ಈ ನಿರ್ಬಂಧವನ್ನು ಹೇರಲಾಗಿದೆ. ಇದು ನೀತಿಯ ಒಂದು ಭಾಗವಾಗಿದೆ’ ಎಂದು ಸ್ಪಷ್ಟನೆ ನೀಡಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು