ಶುಕ್ರವಾರ, ಜನವರಿ 22, 2021
24 °C

ಅಮೆರಿಕ: ಸಿಐಎನ ನಿರ್ದೇಶಕರಾಗಿ ವಿಲಿಯಂ ಜೆ ಬರ್ನ್ಸ್‌ ನೇಮಕ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ವಾಷಿಂಗ್ಟನ್‌: ಅಮೆರಿಕದ ಅಧ್ಯಕ್ಷ ಹುದ್ದೆಗೆ ಆಯ್ಕೆಯಾಗಿರುವ ಜೋ ಬೈಡನ್ ಅವರು ವಿಲಿಯಂ ಜೆ ಬರ್ನ್ಸ್‌ ಅವರನ್ನು ಸಿಐಎನ ನಿರ್ದೇಶಕರಾಗಿ ಸೋಮವಾರ ನಾಮನಿರ್ದೇಶನ ಮಾಡಿದ್ದಾರೆ.

ವಿಲಿಯಂ ಜೆ ಬರ್ನ್ಸ್‌ ಅವರು ಅಮೆರಿಕದ ವಿದೇಶಾಂಗ ಇಲಾಖೆಯ ಸೇವೆಗಳಲ್ಲಿ 33 ವರ್ಷಗಳ ಕಾಲ ಕಾರ್ಯ ನಿರ್ವಹಿಸಿದ್ದಾರೆ. ಅಲ್ಲದೆ  ಡೆಮಾಕ್ರಟಿಕ್ ಮತ್ತು ರಿಪಬ್ಲಿಕನ್ ಪಕ್ಷದ ಕೆಲ ಅಧ್ಯಕ್ಷರ ಆಡಳಿತಾವಧಿಯಲ್ಲಿ ವಿವಿಧ ರಾಷ್ಟ್ರೀಯ ಭದ್ರತಾ ಸ್ಥಾನಗಳಲ್ಲಿ ಸೇವೆ ಸಲ್ಲಿಸಿದ್ದಾರೆ.

‘ಬರ್ನ್ಸ್ ಅವರು ಒಬ್ಬ ಉತ್ತಮ ರಾಜತಾಂತ್ರಿಕ ಅಧಿಕಾರಿ. ದೇಶ ಮತ್ತು ಜನರನ್ನು ಸುರಕ್ಷಿತವಾಗಿರಿಸುವಲ್ಲಿ ದಶಕಗಳ ಉತ್ತಮ ಅನುಭವವನ್ನು ಹೊಂದಿದ್ದಾರೆ’ ಎಂದು ಜೋ ಬೈಡನ್‌ ಅಭಿಪ್ರಾಯಪಟ್ಟಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು