ಅಮೆರಿಕ: ಆರೋಗ್ಯ ಕಾರ್ಯದರ್ಶಿಯಾಗಿ ಕ್ಸೇವಿಯರ್ ಬೆಕೆರಾ ನೇಮಕ

ವಾಷಿಂಗ್ಟನ್: ಅಮೆರಿಕದ ನಿಯೋಜಿತ ಅಧ್ಯಕ್ಷ ಜೋ ಬೈಡನ್ ಅವರು ಕ್ಯಾಲಿಫೋರ್ನಿಯಾ ಅಟಾರ್ನಿ ಜನರಲ್ ಕ್ಸೇವಿಯರ್ ಬೆಕೆರಾ ಅವರನ್ನು ತಮ್ಮ ಆರೋಗ್ಯ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿದೆ.
ಕ್ಸೇವಿಯರ್ ಬೆಕೆರಾ ಅವರು ಆರೋಗ್ಯ ಮತ್ತು ಮಾನವ ಸೇವೆಗಳ ಮುಖ್ಯಸ್ಥರಾಗಿ ನೇಮಕಗೊಳ್ಳಲಿದ್ದಾರೆ. 80 ಸಾವಿರ ಉದ್ಯೋಗಿಗಳನ್ನು ಹೊಂದಿರುವ ಈ ಇಲಾಖೆಯು ಆರೋಗ್ಯ ಸೇವೆಗೆ ಸಂಬಂಧಿಸಿದಂತೆ ಅಪಾರ ಮಹತ್ವ ಪಡೆದಿದೆ. ಔಷಧಿ ಮತ್ತು ಲಸಿಕೆ ವಿತರಣೆ, ವೈದ್ಯಕೀಯ ಸಂಶೋಧನೆ ಮತ್ತು ಆರೋಗ್ಯ ವಿಮೆ ಕಾರ್ಯಕ್ರಮದ ಜವಾಬ್ದಾರಿಯನ್ನು ಈ ಇಲಾಖೆ ವಹಿಸಿಕೊಂಡಿದೆ.
ಇನ್ನೊಂದೆಡೆ ಹಾರ್ವಡ್ ಸಾಂಕ್ರಾಮಿಕ ರೋಗ ತಜ್ಞ ಡಾ. ರೋಷೆಲ್ ವಾಲೆನ್ಸ್ಕಿ ಅವರನ್ನು ರೋಗ ನಿಯಂತ್ರಣ ಕೇಂದ್ರದ ಮುಖ್ಯಸ್ಥರನ್ನಾಗಿ ನೇಮಿಸಲಾಗಿದೆ. ಮಂಗಳವಾರ ಈ ಬಗ್ಗೆ ಅಧಿಕೃತ ಘೋಷಣೆ ಮಾಡುವ ಸಾಧ್ಯತೆಯಿದೆ ಎಂದು ಮೂಲಗಳು ಹೇಳಿವೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.