ಬುಧವಾರ, ಮಾರ್ಚ್ 3, 2021
30 °C

ಸೇನೆಗೆ ಲೈಂಗಿಕ ಅಲ್ಪಸಂಖ್ಯಾತರ ಸೇರ್ಪಡೆಗೆ ಅವಕಾಶ: ನೂತನ ಅಧ್ಯಕ್ಷ ಜೋ ಬೈಡನ್ ಆದೇಶ

ಎಪಿ Updated:

ಅಕ್ಷರ ಗಾತ್ರ : | |

Prajavani

ವಾಷಿಂಗ್ಟನ್‌: ಅಮೆರಿಕದ ಸೇನೆಗೆ ಲೈಂಗಿಕ ಅಲ್ಪಸಂಖ್ಯಾತರ ಸೇರ್ಪಡೆಗೆ ವಿಧಿಸಲಾಗಿದ್ದ ಹಿಂದಿನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆದೇಶವನ್ನು ನೂತನ ಅಧ್ಯಕ್ಷ ಜೋ ಬೈಡನ್ ಅವರು ಸೋಮವಾರ ಹಿಂಪಡೆದಿದ್ದಾರೆ.

ರಕ್ಷಣಾ ಕಾರ್ಯದರ್ಶಿ ಲಾಯ್ಡ್ ಜೆ ಆಸ್ಟಿನ್ ಅವರೊಂದಿಗಿನ ಸಭೆಯ ಬಳಿಕ ಜೋ ಬೈಡನ್‌ ಅವರು ಈ ನಿರ್ಧಾರವನ್ನು ರದ್ದುಗೊಳಿಸುವ ಆದೇಶಕ್ಕೆ ಸಹಿ ಹಾಕಿದ್ದಾರೆ. ಎಲ್ಲ ಅರ್ಹ ಮತದಾರರು ಸಮವಸ್ತ್ರ ಧರಿಸಿ ದೇಶಕ್ಕೆ ಸೇವೆ ಸಲ್ಲಿಸಲು ಅನುವಾಗುವಂತೆ ಆದೇಶ ಹೊರಡಿಸಲಾಗಿದೆ ಎಂದು ಬೈಡನ್‌ ತಿಳಿಸಿದ್ದಾರೆ.

‘ಜೋ ಬೈಡನ್‌ ಅವರು ಸಮಾನತೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಬಗೆಹರಿಸಲು ಒತ್ತು ನೀಡಿದ್ದಾರೆ. ಇದರ ಅಂಗವಾಗಿ ಸೇನೆಯಲ್ಲಿ ಲೈಂಗಿಕ ಅಲ್ಪಸಂಖ್ಯಾತರಿಗೆ ವಿಧಿಸಲಾಗಿದ್ದ ನಿರ್ಬಂಧವನ್ನು ತೆಗೆಯಲಾಗಿದೆ’ ಎಂದು ಮೂಲಗಳು ಹೇಳಿವೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು