ಗುರುವಾರ , ಜುಲೈ 7, 2022
23 °C

ಅಮೆರಿಕ ವಾಯುಪ್ರದೇಶದಲ್ಲಿ ರಷ್ಯಾದ ವಿಮಾನಗಳಿಗೆ ನಿರ್ಬಂಧ: ಬೈಡನ್ ಘೋಷಣೆ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ನವದೆಹಲಿ: ಉಕ್ರೇನ್ ಮೇಲೆ ರಷ್ಯಾ ಆಕ್ರಮಣ ಮುಂದುವರಿದಿದ್ದು, ಇದಕ್ಕೆ ಪ್ರತಿಕ್ರಿಯೆಯಾಗಿ ಅಮೆರಿಕ ಕೂಡ ತಮ್ಮ ವಾಯುಪ್ರದೇಶದಲ್ಲಿ ರಷ್ಯಾದ ವಿಮಾನಗಳಿಗೆ ನಿರ್ಬಂಧ ಹೇರಿವೆ. ಈ ಕುರಿತು ಅಮೆರಿಕ ಅಧ್ಯಕ್ಷ ಜೋ ಬೈಡನ್ ಘೋಷಿಸಿದ್ದಾರೆ.  

ಈಗಾಗಲೇ ಹಲವು ರಾಷ್ಟ್ರಗಳು ರಷ್ಯಾಗೆ ವಿಮಾನಗಳನ್ನು ಸ್ಥಗಿತಗೊಳಿಸಿವೆ. ಅಮೆರಿಕದ ವಾಯುಪ್ರದೇಶವನ್ನು ಬಳಸದಂತೆ ರಷ್ಯಾದ ವಿಮಾನಗಳ ಮೇಲೆ ನಿರ್ಬಂಧ ಹೇರಲಾಗಿದೆ ಎಂದು ಅಲ್ಲಿನ ಮಾಧ್ಯಮಗಳು ವರದಿ ಮಾಡಿವೆ. 

ಇದನ್ನೂ ಓದಿ: 

'ಸ್ಟೇಟ್ ಆಫ್ ದಿ ಯೂನಿಯನ್' ಭಾಷಣದಲ್ಲಿ ಈ ಕುರಿತು ಪ್ರತಿಕ್ರಿಯಿಸಿರುವ ಬೈಡನ್, ರಷ್ಯಾದ ಮೇಲೆ ಕಠಿಣ ನಿರ್ಬಂಧ ಮುಂದುವರಿಸಲು ದೃಢ ನಿಲುವು ತಳೆದಿದ್ದಾರೆ. 

ಅಮೆರಿಕ ಹಾಗೂ ನ್ಯಾಟೊ ಮಿತ್ರ ರಾಷ್ಟ್ರಗಳ ತೀವ್ರ ವಿರೋಧದ ನಡುವೆಯೂ ಉಕ್ರೇನ್ ಮೇಲೆ ರಷ್ಯಾ ಆಕ್ರಮಣ ನಡೆಸಿದೆ. ಯುದ್ಧ ಭೀಕರ ಪರಿಣಾಮವನ್ನು ಬೀರುತ್ತಿದ್ದು, ಹಲವರು ಮೃತಪಟ್ಟಿದ್ದು, ಅಪಾರ ನಷ್ಟ ಸಂಭವಿಸಿದೆ. 

ಏತನ್ಮಧ್ಯೆ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್‌ ಝೆಲೆನ್‌ಸ್ಕಿ ಜೊತೆ ಮಾತನಾಡಿರುವ ಅಮೆರಿಕ ಅಧ್ಯಕ್ಷ ಜೋ ಬೈಡನ್, ಭದ್ರತಾ ಹಾಗೂ ಮಾನವೀಯ ನೆರವು ಸೇರಿದಂತೆ ನಿರಂತರ ಬೆಂಬಲ ಮುಂದುವರಿಸುವುದಾಗಿ ಭರವಸೆ ನೀಡಿದ್ದಾರೆ. 

'ನಮ್ಮ ನಿರ್ಬಂಧಗಳು ಈಗಾಗಲೇ ರಷ್ಯಾ ಮೇಲೆ ಕೆಟ್ಟ ಪರಿಣಾಮವನ್ನು ಬೀರುತ್ತಿದೆ' ಎಂದು ಟ್ವೀಟಿಸಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು