ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ವಾಡ್ ಶೃಂಗಸಭೆ: ಸೆ. 24ರಂದು ಜೋ ಬೈಡನ್‌- ನರೇಂದ್ರ ಮೋದಿ ಭೇಟಿ

Last Updated 14 ಸೆಪ್ಟೆಂಬರ್ 2021, 2:16 IST
ಅಕ್ಷರ ಗಾತ್ರ

ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಜೋ ಬೈಡನ್‌ ನೇತೃತ್ವದಲ್ಲಿ ಸೆಪ್ಟೆಂಬರ್ 24ರಂದು ಶ್ವೇತಭವನದಲ್ಲಿ ಮೊದಲ ಕ್ವಾಡ್‌ ಶೃಂಗಸಭೆಯನ್ನು ಆಯೋಜಿಸಲಾಗಿದೆ. ಭಾರತದ ಪ್ರಧಾನಿ ನರೇಂದ್ರ ಮೋದಿ, ಆಸ್ಟ್ರೇಲಿಯಾದ ಪ್ರಧಾನಿ ಸ್ಕಾಟ್‌ ಮಾರಿಸನ್‌ ಮತ್ತು ಜಪಾನ್ ಪ್ರಧಾನಿ ಯೋಶಿಹಿಡೆ ಸುಗಾ ಭಾಗವಹಿಸಲಿದ್ದಾರೆ.

‘ಕೋವಿಡ್-19 ವಿರುದ್ಧದ ಹೋರಾಟ, ಹವಾಮಾನ ಬಿಕ್ಕಟ್ಟು, ಇಂಡೋ- ಪೆಸಿಫಿಕ್‌ ಪ್ರದೇಶದಲ್ಲಿ ಶಾಂತಿ, ಸಮೃದ್ಧಿ, ಮತ್ತು ಭದ್ರತೆಯನ್ನು ಸ್ಥಾಪಿಸುವಲ್ಲಿ ಉಭಯ ದೇಶಗಳು ಹೇಗೆ ಜತೆಯಾಗಿ ಕೆಲಸ ಮಾಡಬಹುದು ಎಂಬುದರ ಬಗ್ಗೆ ನಾಯಕರು ಚರ್ಚಿಸಲಿದ್ದಾರೆ’ ಎಂದು ಶ್ವೇತಭವನದ ಮಾಧ್ಯಮ ಕಾರ್ಯದರ್ಶಿ ಜೆನ್‌ ಸಾಕಿ ಹೇಳಿದ್ದಾರೆ.

‘ಕ್ವಾಡ್‌ ಶೃಂಗಸಭೆಯನ್ನು ಆಯೋಜಿಸುವ ಮೂಲಕ 21ನೇ ಶತಮಾನದ ಸವಾಲುಗಳನ್ನು ಎದುರಿಸುವ ನಿಟ್ಟಿನಲ್ಲಿ ಉಭಯದ ದೇಶಗಳ ನಡುವೆ ಬಾಂಧವ್ಯ ವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ. ಜತೆಗೆ, ಇಂಡೋ-ಪೆಸಿಫಿಕ್‌ ಪ್ರದೇಶದಲ್ಲಿ ತೊಡಗಿಸಿಕೊಳ್ಳುವ ಬೈಡೆನ್-ಹ್ಯಾರಿಸ್ ಆಡಳಿತದ ಆದ್ಯತೆಯನ್ನು ತೋರಿಸುತ್ತದೆ’ ಎಂದು ಸಾಕಿ ಹೇಳಿದ್ದಾರೆ.

1.3 ದಶಲಕ್ಷ ಚದರ ಮೈಲಿಯ ದಕ್ಷಿಣ ಚೀನಾ ಸಮುದ್ರವನ್ನು ತನ್ನ ಸಾರ್ವಭೌಮ ಪ್ರದೇಶವೆಂದು ಚೀನಾ ಹೇಳಿಕೊಂಡಿದೆ. ಅಲ್ಲದೆ ಮಲೇಷ್ಯಾ, ಫಿಲಿಪೈನ್ಸ್, ತೈವಾನ್ ಮತ್ತು ವಿಯೆಟ್ನಾಂ ದೇಶಗಳು ಕೂಡ ಇಂಡೋ-ಪೆಸಿಫಿಕ್‌ ಪ್ರದೇಶದಲ್ಲಿ ಹಕ್ಕು ಸಾಧಿಸುವ ಉದ್ದೇಶದಿಂದ ಸೇನಾ ನೆಲೆಗಳನ್ನು ನಿರ್ಮಿಸುತ್ತಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT