ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಪಾನ್‌ನಲ್ಲಿ 24ರಂದು ಕ್ವಾಡ್ ಶೃಂಗ: ಮೋದಿ- ಜೋ ಬೈಡನ್ ದ್ವಿಪಕ್ಷೀಯ ಚರ್ಚೆ

Last Updated 19 ಮೇ 2022, 13:29 IST
ಅಕ್ಷರ ಗಾತ್ರ

ವಾಷಿಂಗ್ಟನ್(ಪಿಟಿಐ): ಇದೇ ತಿಂಗಳ 24ರಂದು ಟೋಕಿಯೊದಲ್ಲಿ ನಡೆಯುವ ಕ್ವಾಡ್ ಶೃಂಗಸಭೆಯಲ್ಲಿ ಭಾಗವಹಿಸಲು ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರು ಜಪಾನ್ ಪ್ರವಾಸ ಕೈಗೊಳ್ಳಲಿದ್ದಾರೆ. ಈ ಸಂದರ್ಭದಲ್ಲಿ ಬೈಡನ್ ಅವರು, ಪ್ರಧಾನಿ ನರೇಂದ್ರ ಮೋದಿ ಜೊತೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ ಎಂದು ಅಮೆರಿಕದ ರಾಷ್ಟ್ರೀಯ ಭದ್ರತಾ ಸಲಹೆಗಾರಜೇಕ್ ಸುಲ್ಲಿವಾನ್ ತಿಳಿಸಿದ್ದಾರೆ.

ಈ ಸಂಬಂಧ ಗುರುವಾರ ಮಾತನಾಡಿದ ಅವರು, 'ಈ ಶೃಂಗಸಭೆಯಲ್ಲಿ ಕ್ವಾಡ್ ಸದಸ್ಯ ದೇಶಗಳು(ಅಮೆರಿಕ, ಭಾರತ, ಆಸ್ಟ್ರೇಲಿಯಾ ಮತ್ತು ಜಪಾನ್) ಇಂಡೊ-ಪೆಸಿಫಿಕ್‌ ಅನ್ನು ಮುಕ್ತವಾಗಿಡುವ ನಿಟ್ಟಿನಲ್ಲಿ ಒಟ್ಟಿಗೆ ಕಾರ್ಯ ನಿರ್ವಹಿಸಲಿವೆ. ಅಲ್ಲದೆ, ಈ ಪ್ರಾಂತ್ಯದಲ್ಲಿ ಮಹತ್ವಾಕಾಂಕ್ಷೆಯ ಆರ್ಥಿಕ ಉತ್ತೇಜನಕ್ಕಾಗಿ ಬೈಡನ್ ಅವರು, ನೂತನ ಇಂಡೊ-ಪೆಸಿಫಿಕ್ ಆರ್ಥಿಕ ಚೌಕಟ್ಟಿಗೆ ಚಾಲನೆ ನೀಡಲಿದ್ದಾರೆ’ ಎಂದು ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT