ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

28 ವರ್ಷಗಳಿಂದ ರಿಪಬ್ಲಿಕನ್ ಭದ್ರಕೋಟೆಯಾಗಿದ್ದ ಜಾರ್ಜಿಯಾದಲ್ಲಿ ಬೈಡನ್ ಗೆಲುವು

ಮತ ಪತ್ರಗಳ ಮರುಎಣಿಕೆ; 12284 ಮತಗಳ ಅಂತರದಿಂದ ಗೆಲುವು
Last Updated 20 ನವೆಂಬರ್ 2020, 6:05 IST
ಅಕ್ಷರ ಗಾತ್ರ

ವಾಷಿಂಗ್ಟನ್: ಇಪ್ಪತ್ತೆಂಟು ವರ್ಷಗಳಿಂದ ರಿಪಬ್ಲಿಕನ್ ಪಕ್ಷದ ಭದ್ರಕೋಟೆಯಾಗಿದ್ದ ಜಾರ್ಜಿಯಾ ಕ್ಷೇತ್ರದಲ್ಲೂ ನಿಯೋಜಿತ ಅಮೆರಿಕ ಅಧ್ಯಕ್ಷ, ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿ ಜೋ ಬೈಡನ್ ಗೆಲುವು ಸಾಧಿಸಿದ್ದಾರೆ.

ನ.3 ರಂದು ನಡೆದ ಅಧ್ಯಕ್ಷೀಯ ಚುನಾವಣೆಯ ಮತ ಎಣಿಕೆ ಕಾರ್ಯ ಪೂರ್ಣಗೊಂಡಿದ್ದು, ಕಾರಣಾಂತರಗಳಿಂದಾಗಿ ಕೆಲವು ಕ್ಷೇತ್ರಗಳಲ್ಲಿ ಮತಗಳ ಮರು ಎಣಿಕೆ ಕಾರ್ಯ ನಡೆಯುತ್ತಿದೆ.

ಜಾರ್ಜಿಯಾ ಕ್ಷೇತ್ರದಲ್ಲಿ ಚುನಾವಣಾ ಅಧಿಕಾರಿಗಳು ಮತ ಪತ್ರಗಳನ್ನು ಮರುಎಣಿಕೆ ಮಾಡಿದ ನಂತರ ಜೋ ಬೈಡನ್ ವಿಜೇತರಾಗಿರುವುದಾಗಿ ಘೋಷಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳುವ ಲಿಂಕ್:ಆಂಡ್ರಾಯ್ಡ್ ಆ್ಯಪ್|ಐಒಎಸ್ ಆ್ಯಪ್

50 ಲಕ್ಷ ಮತಗಳನ್ನು ಮರುಎಣಿಕೆ ಮಾಡಿದ ನಂತರ ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿ ಜೋ ಬೈಡನ್ ಅವರು ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಡೊನಾಲ್ಡ್ ಟ್ರಂಪ್‌ ವಿರುದ್ಧ 12,284 ಮತಗಳ ಅಂತರದಿಂದ ವಿಜೇತರಾಗಿರುವುದಾಗಿ ಚುನಾವಣಾ ಅಧಿಕಾರಿಗಳು ಘೋಷಿಸಿದರು. ಈ ಮೊದಲುಅವರು ಬೈಡನ್ 14000 ಮತಗಳಿಂದ ಜಯಗಳಿಸಿದ್ದರು.

1992 ರಲ್ಲಿ ಅಭ್ಯರ್ಥಿ ಬಿಲ್‌ ಕ್ಲಿಂಟನ್ ಜಯಗಳಿಸಿದ ನಂತರ, ಈ ಕ್ಷೇತ್ರದಲ್ಲಿ ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಿರಲಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT