ಗುರುವಾರ , ಮೇ 6, 2021
23 °C

ಬಿಲ್‌ ಗೇಟ್ಸ್‌ -ಮೆಲಿಂಡಾ ಗೇಟ್ಸ್ ದಂಪತಿ 27 ವರ್ಷಗಳ ಬಳಿಕ ವಿಚ್ಛೇದನ ಘೋಷಣೆ

ಎಎಫ್‌ಪಿ Updated:

ಅಕ್ಷರ ಗಾತ್ರ : | |

ವಾಷಿಂಗ್ಟನ್‌: ಮೈಕ್ರೋಸಾಫ್ಟ್‌ ಸಂಸ್ಥಾಪಕ ಬಿಲ್ ಗೇಟ್ಸ್‌ ಮತ್ತು ಮೆಲಿಂಡಾ ಗೇಟ್ಸ್‌ ದಂಪತಿ ಮದುವೆಯಾಗಿ 27 ವರ್ಷಗಳ ದಾಂಪತ್ಯದ ನಂತರ ವಿಚ್ಛೇದನ ಪಡೆಯುವುದಾಗಿ ಘೋಷಿಸಿದ್ದಾರೆ.

ವಿಶ್ವದ ಶ್ರೀಮಂತ ದಂಪತಿಗಳಲ್ಲಿ ಈ ಜೋಡಿಯು ಒಂದಾಗಿದೆ. ಇವರ ಜಂಟಿ ಸಂಪತ್ತನ್ನು 13,000 ಕೋಟಿ ಡಾಲರ್ ಇದೆ ಎಂದು ಅಂದಾಜಿಸಲಾಗಿದೆ. ಬಿಲ್‌ ಗೇಟ್ಸ್‌ ಅವರ ಬಿಲ್ ಮತ್ತು ಮೆಲಿಂಡಾ ಗೇಟ್ಸ್ ಫೌಂಡೇಷನ್‌ ಹಲವು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿದೆ.

ವಿಚ್ಛೇದನ ನೀಡಿರುವ ಕುರಿತು ಟ್ವೀಟ್‌ ಮಾಡಿರುವ ಬಿಲ್‌ ಗೇಟ್ಸ್‌, ‘27 ವರ್ಷಗಳ ದಾಂಪತ್ಯದ ನಂತರ ನಾವು ವಿಚ್ಛೇದನ ಘೋಷಿಸಿದ್ದೇವೆ. ಜಾಗತಿಕ ಆರೋಗ್ಯ, ಲಿಂಗ ಸಮಾನತೆ, ಶಿಕ್ಷಣ ಸೇರಿದಂತೆ ಹಲವು ಸಮಾಜಮುಖಿ ಕಾರ್ಯಕ್ರಮಗಳಿಗೆ ಧನಸಹಾಯ ನೀಡುವ ಕೆಲಸವನ್ನು ಬಿಲ್ ಮತ್ತು ಮೆಲಿಂಡಾ ಗೇಟ್ಸ್ ಫೌಂಡೇಶನ್‌ನಲ್ಲಿ ತಮ್ಮ ಜಂಟಿ ಸಹಭಾಗಿತ್ವವನ್ನು ಮುಂದುವರಿಸುತ್ತೇವೆ’ ಎಂದು ಹೇಳಿದ್ದಾರೆ.

‘ನಾವು ಮದುವೆ ಸಂಬಂಧವನ್ನು ಕೊನೆಗೊಳಿಸುವ ನಿರ್ಧಾರವನ್ನು ಕೈಗೊಂಡಿದ್ದೇವೆ’ ಎಂದು ಅವರು ಜಂಟಿ ಹೇಳಿಕೆ ನೀಡಿರುವ ಪ್ರತಿಯನ್ನು ಅಧಿಕೃತ ಟ್ವಿಟರ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ... ವೈದ್ಯಕೀಯ ನೆರವು: ಅಮೆರಿಕದಿಂದ ಭಾರತಕ್ಕೆ ಬರಬೇಕಿದ್ದ ವಿಮಾನಗಳು ವಿಳಂಬ

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು