ಗುರುವಾರ , ಜನವರಿ 28, 2021
23 °C

ಭಾರತದ ನಾಯಕತ್ವ, ಲಸಿಕೆ ಉತ್ಪಾದನಾ ಸಾಮರ್ಥ್ಯ ಪ್ರಶಂಸಿಸಿದ ಬಿಲ್ ಗೇಟ್ಸ್

ಪ್ರಜಾವಾಣಿ ವೆಬ್‌ ಡೆಸ್ಕ್ Updated:

ಅಕ್ಷರ ಗಾತ್ರ : | |

Bill Gates

ವಾಷಿಂಗ್ಟನ್: ಭಾರತದ ನಾಯಕತ್ವ ಹಾಗೂ ಲಸಿಕೆ ಉತ್ಪಾದನಾ ಸಾಮರ್ಥ್ಯವನ್ನು ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್ ಗೇಟ್ಸ್‌ ಪ್ರಶಂಸಿಸಿದ್ದಾರೆ.

ಭಾರತದ ಪ್ರಧಾನಿ ಕಾರ್ಯಾಲಯದ ಅಧಿಕೃತ ಟ್ವಿಟರ್ ಖಾತೆಯನ್ನು ಟ್ಯಾಗ್ ಮಾಡಿ ಟ್ವೀಟ್ ಮಾಡಿರುವ ಅವರು, ‘ವೈಜ್ಞಾನಿಕ ಆವಿಷ್ಕಾರಗಳಲ್ಲಿ ಭಾರತದ ನಾಯಕತ್ವ ಅದ್ಭುತವಾಗಿದೆ. ಇಡೀ ವಿಶ್ವವು ಕೋವಿಡ್–19 ಸಾಂಕ್ರಾಮಿಕವನ್ನು ಕೊನೆಗೊಳಿಸಬೇಕೆಂದು ಕಾರ್ಯನಿರ್ವಹಿಸುತ್ತಿರುವ ಈ ಸಂದರ್ಭದಲ್ಲಿ ಭಾರತದ ಲಸಿಕೆ ಉತ್ಪಾದನಾ ಸಾಮರ್ಥ್ಯವೂ ಉತ್ತಮವಾದದ್ದಾಗಿದೆ’ ಎಂದು ಉಲ್ಲೇಖಿಸಿದ್ದಾರೆ.

ಆಕ್ಸ್‌ಫರ್ಡ್ ಯುನಿವರ್ಸಿಟಿ ಹಾಗೂ ಅಸ್ಟ್ರಾಜೆನೆಕಾ ಸಂಸ್ಥೆಗಳು ಕೋವಿಡ್–19ಗೆ ಅಭಿವೃದ್ಧಿಪಡಿಸಿದ ‘ಕೋವಿಶೀಲ್ಡ್‌’ ಲಸಿಕೆಯ ತುರ್ತು ಬಳಕೆಗೆ ಭಾರತದಲ್ಲಿ ಈಗಾಗಲೇ ಅನುಮೋದನೆ ನೀಡಲಾಗಿದೆ. ಜತೆಗೆ, ಭಾರತ್ ಬಯೋಟೆಕ್ ಅಭಿವೃದ್ಧಿಪಡಿಸಿರುವ ‘ಕೋವಾಕ್ಸಿನ್’ ಲಸಿಕೆ ತುರ್ತು ಬಳಕೆಗೂ ಅನುಮೋದನೆ ನೀಡಲಾಗಿದೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು