ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಬೂಲ್ ವಿಮಾನ ನಿಲ್ದಾಣದಲ್ಲಿ ಭಾರೀ ಸ್ಫೋಟ

Last Updated 26 ಆಗಸ್ಟ್ 2021, 15:01 IST
ಅಕ್ಷರ ಗಾತ್ರ

ಕಾಬೂಲ್: ಅಫ್ಗಾನಿಸ್ತಾನದ ಕಾಬೂಲ್ ವಿಮಾನ ನಿಲ್ದಾಣದಲ್ಲಿ ಗುರುವಾರ ಭಾರೀ ಸ್ಫೋಟ ಸಂಭವಿಸಿದೆ ಎಂದು ಅಮೆರಿಕದ ಭದ್ರತಾ ಪ್ರಧಾನ ಕಚೇರಿ ಪೆಂಟಗನ್ ತಿಳಿಸಿದೆ.

ಕಾಬೂಲ್ ವಿಮಾನ ನಿಲ್ದಾಣದಲ್ಲಿ ಉಗ್ರರ ದಾಳಿ ನಡೆಯುವ ಸಾಧ್ಯತೆಯಿದೆ ಎಂದು ಅಮೆರಿಕ ಸೇರಿದಂತೆ ಪಾಶ್ಚಾತ್ಯ ರಾಷ್ಟ್ರಗಳು ಎಚ್ಚರಿಕೆ ನೀಡಿದ ಬೆನ್ನಲ್ಲೇ ಸ್ಫೋಟ ಸಂಭವಿಸಿದೆ.

ಅಫ್ಗಾನಿಸ್ತಾನದಲ್ಲಿ ತಾಲಿಬಾನಿಗಳು ಸಂಪೂರ್ಣ ಹಿಡಿತ ಸಾಧಿಸಿರುವ ಹಿನ್ನೆಲೆಯಲ್ಲಿ ಪಲಾಯನ ಮಾಡುವ ಸಲುವಾಗಿ ವಿಮಾನ ನಿಲ್ದಾಣದಲ್ಲಿ ಅಸಂಖ್ಯಾತ ಜನರು ಜಮಾಯಿಸಿದ್ದರು.

'ಕಾಬೂಲ್ ವಿಮಾನ ನಿಲ್ದಾಣದ ಹೊರಗಡೆ ಸ್ಫೋಟ ನಡೆದಿರುವುದನ್ನು ನಾವು ಖಚಿತಪಡಿಸುತ್ತಿದ್ದೇವೆ. ಸಾವು-ನೋವುಗಳ ಬಗ್ಗೆ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ. ಹೆಚ್ಚಿನ ವಿವರಗಳನ್ನು ನೀಡಲಿದ್ದೇವೆ' ಎಂದು ಪೆಂಟಗನ್ ವಕ್ತಾರ ಜಾನ್ ಕಿರ್ಬಿ ತಿಳಿಸಿದ್ದಾರೆ.

ಈ ಮೊದಲು ವಿಮಾನ ನಿಲ್ದಾಣಕ್ಕೆ ತೆರಳದಂತೆ ಪ್ರಜೆಗಳಿಗೆ ಅಮೆರಿಕ ಸರ್ಕಾರ ಎಚ್ಚರಿಕೆಯನ್ನು ರವಾನಿಸಿತ್ತು. ಇದಕ್ಕೆ ಸಮಾನವಾಗಿ ಬ್ರಿಟನ್ ಹಾಗೂ ಆಸ್ಟ್ರೇಲಿಯಾ ಸರ್ಕಾರಗಳು ಭಯೋತ್ಪಾದನಾ ದಾಳಿ ಬಗ್ಗೆ ಎಚ್ಚರಿಸಿದ್ದವು.

ಆಗಸ್ಟ್ 15ರಂದು ತಾಲಿಬಾನ್ ಹಿಡಿತ ಸಾಧಿಸಿದ ಬಳಿಕ ಅಮೆರಿಕ ನೇತೃತ್ವದಲ್ಲಿ ಇದುವರೆಗೆ 95,000ಕ್ಕೂ ಹೆಚ್ಚು ವಿದೇಶಿಯರು ಹಾಗೂ ಅಫ್ಗನ್‌ರನ್ನು ಏರ್‌ಲಿಫ್ಟ್ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT