ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಲೂಚಿಸ್ತಾನದ ಕ್ವೆಟ್ಟಾದಲ್ಲಿ ಬಾಂಬ್ ಸ್ಫೋಟ: 4 ಸಾವು, 15ಕ್ಕೂ ಅಧಿಕ ಜನರಿಗೆ ಗಾಯ

Last Updated 31 ಡಿಸೆಂಬರ್ 2021, 2:24 IST
ಅಕ್ಷರ ಗಾತ್ರ

ಕ್ವೆಟ್ಟಾ: ಗುರುವಾರ ರಾತ್ರಿ ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದ ಕ್ವೆಟ್ಟಾ ನಗರದ ಕೇಂದ್ರ ಭಾಗದಲ್ಲಿ ನಡೆದ ಬಾಂಬ್ ಸ್ಫೋಟದಲ್ಲಿ ಕನಿಷ್ಠ ನಾಲ್ಕು ಮಂದಿ ಸಾವಿಗೀಡಾಗಿದ್ದು, 15 ಮಂದಿ ಗಾಯಗೊಂಡಿದ್ದಾರೆ.

ಜಿನ್ನಾ ರಸ್ತೆಯ ವಿಜ್ಞಾನ ಕಾಲೇಜಿನ ಬಳಿ ನಿಲ್ಲಿಸಿದ್ದ ಕಾರಿನ ಪಕ್ಕದಲ್ಲಿ ಬಾಂಬ್ ಅಡಗಿಸಿಟ್ಟಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಿನ್ನಾ ರಸ್ತೆಯು ಕ್ವೆಟ್ಟಾದ ಪ್ರಮುಖ ರಸ್ತೆಗಳಲ್ಲಿ ಒಂದಾಗಿದೆ ಮತ್ತು ಅತ್ಯಂತ ಜನನಿಬಿಡ ಶಾಪಿಂಗ್ ಪ್ರದೇಶವಾಗಿದೆ. ಸ್ಫೋಟಕ್ಕೆ ಬಳಸಲಾದ ಬಾಂಬ್ ಕುರಿತಂತೆ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಮೃತದೇಹಗಳು ಮತ್ತು ಗಾಯಾಳುಗಳನ್ನು ಕ್ವೆಟ್ಟಾದ ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಸ್ಫೋಟದ ನಂತರ ಹತ್ತಿರದ ಕಟ್ಟಡಗಳ ಗಾಜುಗಳು ಒಡೆದುಹೋಗಿವೆ ಮತ್ತು ಗಾಯಗೊಂಡವರಲ್ಲಿ ಹೆಚ್ಚಿನವರು ಗಾಜಿನ ಚೂರುಗಳಿಂದಾದ ಗಾಯಗಳಿಂದ ಬಳಲುತ್ತಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸ್ಫೋಟದ ಸ್ಥಳವು ನಗರದ ಪ್ರತಿಷ್ಠಿತ ಸೆರೆನಾ ಹೋಟೆಲ್‌ನಿಂದ ಕೇವಲ 2 ಕಿಮೀ ದೂರದಲ್ಲಿದೆ. ಈ ವರ್ಷದ ಏಪ್ರಿಲ್‌ನಲ್ಲಿ ಈ ಹೋಟೆಲ್‌ನಲ್ಲಿ ಸಂಭವಿಸಿದ್ದ ಪ್ರಬಲ ಬಾಂಬ್ ಸ್ಫೋಟದಲ್ಲಿ ಐದು ಜನರು ಮೃತಪಟ್ಟಿದ್ದರು.

ಪ್ರಕ್ಷುಬ್ಧ ಖೈಬರ್ ಪಖ್ತುನ್ಖ್ವಾ ಮತ್ತು ಬಲೂಚಿಸ್ತಾನ ಪ್ರಾಂತ್ಯಗಳು ಇತ್ತೀಚಿನ ವರ್ಷಗಳಲ್ಲಿ ಭಯೋತ್ಪಾದಕ ದಾಳಿಯ ಕೇಂದ್ರಗಳಾಗಿವೆ. ಆಗಸ್ಟ್ 15 ರಂದು ತಾಲಿಬಾನ್ ಅಫ್ಗಾನಿಸ್ತಾನವನ್ನು ಸ್ವಾಧೀನಪಡಿಸಿಕೊಂಡ ನಂತರ ದಾಳಿಗಳು ಹೆಚ್ಚಳವಾಗಿರುವುದು ಕಳವಳಕ್ಕೆ ಕಾರಣವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT