ಗುರುವಾರ , ಅಕ್ಟೋಬರ್ 1, 2020
27 °C

ಟೆಕ್ಸಾಸ್: ಡೊನಾಲ್ಡ್ ಟ್ರಂಪ್ ಪರ ಪ್ರಚಾರ ರ್‍ಯಾಲಿ ವೇಳೆ ಹಲವು ಬೋಟ್‌ಗಳು ಮುಳುಗಡೆ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

Boats sink during Donald Trump parade in Lake Travis Texas

ಆಸ್ಟಿನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪರ ಚುನಾವಣಾ ಪ್ರಚಾರ ರ್‍ಯಾಲಿ ಸಂದರ್ಭ ಟೆಕ್ಸಾಸ್‌ನ ಟ್ರಾವಿಸ್ ಸರೋವರದಲ್ಲಿ ಹಲವು ಬೋಟ್‌ಗಳು ಮುಳುಗಿರುವ ಬಗ್ಗೆ ವರದಿಯಾಗಿದೆ.

ಬೋಟ್‌ಗಳು ಮುಳುಗಿರುವ ಬಗ್ಗೆ ಸ್ಥಳೀಯಾಡಳಿತಕ್ಕೆ ಅನೇಕ ತುರ್ತು ಕರೆಗಳು ಬಂದಿವೆ. ಬೋಟ್‌ಗಳು ಮುಳುಗಿರುವುದನ್ನು ಹಿರಿಯ ಸಾರ್ವಜನಿಕ ಸಂಪರ್ಕಾಧಿಕಾರಿ ಖಚಿತಪಡಿಸಿದ್ದಾರೆ ಎಂದು ಸಿಎನ್‌ಎನ್‌ ಸುದ್ದಿವಾಹಿನಿ ವರದಿ ಮಾಡಿದೆ.

ಈ ಪ್ರಚಾರ ರ್‍ಯಾಲಿಯಲ್ಲಿ 2,600ಕ್ಕೂ ಹೆಚ್ಚು ಜನರನ್ನು ಸೇರಿಸಲು ಉದ್ದೇಶಿಸಲಾಗಿತ್ತು. ಘಟನೆ ವೇಳೆ ಎಷ್ಟು ಮಂದಿ ಇದ್ದರು ಎಂಬುದು ಇನ್ನೂ ತಿಳಿದುಬಂದಿಲ್ಲ. ಈವರೆಗೆ ಸಾವು–ನೋವು ವರದಿಯಾಗಿಲ್ಲ ಎಂದು ವರದಿ ಉಲ್ಲೇಖಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು